ಬೆಂಗಳೂರು : ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ನ ಬೆಲೆಯನ್ನು 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಘೋಷಿಸಿದ್ದಾರೆ.
ಉಜ್ವಲ ಯೋಜನೆಯ ಫಲಾನುಭವಿಗಳು ಮತ್ತು ಸಾಮಾನ್ಯ ಗ್ರಾಹಕರು ಇಬ್ಬರಿಗೂ ಈ ಬೆಲೆ ಏರಿಕೆ ಅನ್ವಯವಾಗಲಿದೆ ಎಂದು ಅವರು ಹೇಳಿದ್ದಾರೆ. ಇನ್ನುಮುಂದೆ 14.2 ಕೆ.ಜಿಯ ಎಲ್ಪಿಜಿ ಸಿಲಿಂಡರ್ ಬೆಲೆ 803 ರೂ. ಯಿಂದ 853 ಕ್ಕೆ ಏರಿಕೆಯಾಗಲಿದೆ. ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ ರೂ. 503 ಕ್ಕೆ ಸಿಗುತ್ತಿದ್ದ ಗ್ಯಾಸ್ ಸಿಲಿಂಡರ್, ಇನ್ನು ಮುಂದೆ ರೂ.553ಕ್ಕೆ ಸಿಗಲಿದೆ.
ಅನಿಲ ಕಂಪನಿಗಳು ಸಿಲಿಂಡರ್ ಬೆಲೆ ಹೆಚ್ಚಿಸುವುದಾಗಿ ತಿಳಿಸಿವೆ, ಹೀಗಾಗಿ ಪ್ರತಿ ಎಲ್ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಲಿದೆ.
ಪ್ರತಿ ತಿಂಗಳು ವಾಣಿಜ್ಯ ಸಿಲಿಂಡರ್ ದರವನ್ನು ಏರಿಕೆ ಮಾಡಲಾಗುತ್ತದೆ. ಅದರಂತೆಯೇ ಈಗಾಗಲೇ ಏಪ್ರಿಲ್ 1ರಂದು ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನಯ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಗೃಹ ಬಳಕೆ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನೂ ಏರಿಕೆ ಮಾಡಿ ಜನರಿಗೆ ಶಾಕ್ ನೀಡಿದೆ.