ಬೆಂಗಳೂರು : ಬೇಸಿಗೆ ರಜೆ ಮುಗಿದು ವಿದ್ಯಾರ್ಥಿಗಳು ಶಾಲೆಗಳು ಆರಂಭವಾಗಿದ್ದು, ಈ ಮಧ್ಯೆ ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಾಜ್ಯ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗ್ರತಾ ಕ್ರಮ ಪಾಲಿಸಬೇಕು. ಹಾಗೇ ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.vtu
ಶಾಲೆಗಳಿಗೆ ಬಿಡುಗಡೆ ಮಾಡಿದ ಮಾರ್ಗಸೂಚಿ ಅಂಶಗಳು ಈ ಕೆಳಕಂಡಂತಿದೆ..
*ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು. *ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.
*ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗ್ರತಾ ಕ್ರಮ ಪಾಲಿಸಬೇಕು. ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.
*ಎರಡು ದಿನಗಳ ಹಿಂದೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದರು.

