ಬೆಂಗಳೂರು : ವಿಧಾನ ಪರಿಷತ್ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಿಗದಿಯಾಗಿದೆ. ಈ ನಿಮಿತ್ತ ಕಾಂಗ್ರೆಸ್ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿದೆ. ಬೈಂದೂರಿನ ರಾಜು ಪೂಜಾರಿ ಅವರನ್ನೇ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಅಂತಿಮಗೊಳಿಸಿದೆ.ರಾಜು ಪೂಜಾರಿ ತಮ್ಮ ಅಭ್ಯರ್ಥಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು ಪತ್ರಿಕಾ ಪ್ರಕಟಣೆ ಇಂದು ಹೊರಡಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಗೆ ಸ್ಪರ್ಧಿಸಲು ಈ ಮೊದಲ ಭುಜಂಗ ಶೆಟ್ಟಿ, ಬೈಂದೂರಿನ ರಾಜು ಪೂಜಾರಿ, ಹರಿಪ್ರಸಾದ್ ರೈ, ಡಿಆರ್ ರಾಜು ಮತ್ತು ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಅವರ ಹೆಸರುಗಳು ಕೇಳಿ ಬಂದಿದ್ದವು. ಇದೀಗ ಬೈಂದೂರಿನ ರಾಜು ಪೂಜಾರಿ ಅವರನ್ನೇ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಅಂತಿಮಗೊಳಿಸಿದೆ.

