By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗೋವುಗಳ ಮೇಲೆ ದುಷ್ಕರ್ಮಿಗಳ ವಿಕೃತಿ : ಕಠಿಣ ಶಿಕ್ಷೆಗೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಗೋವುಗಳ ಮೇಲೆ ದುಷ್ಕರ್ಮಿಗಳ ವಿಕೃತಿ : ಕಠಿಣ ಶಿಕ್ಷೆಗೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ

ತುಮಕೂರು-Tumakuruರಾಜ್ಯ-Karnataka

ಗೋವುಗಳ ಮೇಲೆ ದುಷ್ಕರ್ಮಿಗಳ ವಿಕೃತಿ : ಕಠಿಣ ಶಿಕ್ಷೆಗೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ

Cow abuse: Protest in Tumkur demanding strict punishment

Published January 18, 2025
Share
2 Min Read
Cow abuse: Protest in Tumkur demanding strict punishment
SHARE

ತುಮಕೂರು, ಜ.8: ರಾಜ್ಯದಲ್ಲಿ ಮಾರಕಾಸ್ತ್ರಗಳಿಂದ ಗೋವುಗಳ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ದುರುಳರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ತುಮಕೂರು ಗೋ ಸಂರಕ್ಷಣಾ ಸಂವರ್ಧನ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳ ಮುಖಂಡರು, ಗೋವುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮುಖಂಡ ಕೋರಿ ಮಂಜುನಾಥ್ ಮಾತನಾಡಿ, ‘ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ, ನಂಜನಗೂಡಿನಲ್ಲಿ ಶ್ರೀಕಂಠೇಶ್ವರ ದೇವರಿಗೆ ಹರಕೆ ಬಿಟ್ಟಿದ್ದ ಗೂಳಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಕೃತ್ಯ ಖಂಡನೀಯ. ಗೋವುಗಳನ್ನು ಪೂಜಿಸುವ ಹಿಂದೂಗಳ ಭಾವನೆಗೆ ಈ ಪ್ರಕರಣಗಳು ನೋವು ಉಂಟು ಮಾಡಿವೆ. ದುಷ್ಕೃತ್ಯ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.

ಸಂಘನೆಯ ಮುಖಂಡ ಪ್ರದೀಪ್ ಮಾತನಾಡಿ, ‘ನಮ್ಮ ಪೂಜ್ಯನೀಯ, ನಿರುಪದ್ರವಿ ಗೋವಿನ ಕೆಚ್ಚಲು ಕೊಯ್ದಿದ್ದಾರೆ, ಹರಕೆ ಗೂಳಿಯ ಮೇಲೆ ಅಮಾನುಷ ಹಲ್ಲೆ ಮಾಡಿದ್ದಾರೆ. ಈ ಪ್ರಕರಣಗಳು ಗೋವನ್ನು ಪೂಜಿಸುವ ಹಿಂದೂಗಳ ಭಾವನೆ ಧಕ್ಕೆ ಮಾಡಿ, ನೋವು ಉಂಟು ಮಾಡುವ ಉದ್ದೇಶದ ಪೂರ್ವಯೋಜಿತ ಕೃತ್ಯ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು, ಕೃತ್ಯದ ಹಿಂದಿರುವ ಎಲ್ಲರನ್ನೂ ಬಂಧಿಸಿ ಶಿಕ್ಷೆಗೊಳಪಡಿಸಬೇಕು, ಇಂತಹ ಪ್ರಕರಣಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿಗೆ ತರಬೇಕು’ ಎಂದು ಆಗ್ರಹಿಸಿದರು.

ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಮಾತನಾಡಿ, ‘ನಾವು ಹೆತ್ತ ತಾಯಿ ಹಾಗೂ ಹಸುವಿನ ಹಾಲು ಕುಡಿದು ಬೆಳೆದವರು. ಗೋವು ನಮಗೆ ತಾಯಿ ಸಮಾನ, ಗೋವುಗಳನ್ನು ತಾಯಿಯಂತೇ ಗೌರವಿಸುವ ಸಂಸ್ಕೃತಿ ನಮ್ಮದು. ಗೋವುಗಳ ಬಗ್ಗೆ ಪೂಜ್ಯ ಭಾವನೆ ಹೊಂದಿರುವ ನಮಗೆ ಗೋವುಗಳ ಮೇಲಿನ ಹಲ್ಲೆ ಸಹಿಸಲು ಸಾಧ್ಯವಿಲ್ಲ. ಗೋವುಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಕೊಲೆ ಯತ್ನದ ಸೆಕ್ಷನ್ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಿ ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿವಿಧ ಸಂಘಟನೆಗಳ ಮುಖಂಡರಾದ ಜಿ.ಕೆ.ಶ್ರೀನಿವಾಸ್, ನಾಗೇಂದ್ರಪ್ರಸಾದ್, ಜಿ.ಎಸ್.ಬಸವರಾಜು, ಸಿದ್ದೇಶ್, ಉಮೇಶ್, ಭಾಸ್ಕರಾಚಾರ್, ಬಿಜೆಪಿ ಮುಖಂಡರಾದ ಎಸ್.ಶಿವಪ್ರಸಾದ್, ಬ್ಯಾಟರಂಗೇಗೌಡ, ಟಿ.ಹೆಚ್.ಹನುಮಂತರಾಜು, ಸಂದೀಪ್‌ ಗೌಡ, ಭೈರಣ್ಣ, ವಿಷ್ಣುವರ್ಧನ್, ಸತ್ಯಮಂಗಲ ಜಗದೀಶ್, ಚೇತನ್, ಧನುಷ್, ಬನಶಂಕರಿ ಬಾಬು, ಜ್ಯೋತಿ ತಿಪ್ಪೇಸ್ವಾಮಿ, ರಾಮಚಂದ್ರರಾವ್, ವೆಂಕಟೇಶಾಚಾರ್, ಶಬ್ಬೀರ್ ಅಹ್ಮದ್, ಹನುಮಂತರಾಜು, ಪ್ರಮೋದ್ ಗೌಡ ಮೊದಲಾದವರು ಭಾಗವಹಿಸಿದ್ದರು

You Might Also Like

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೆಂಗಳೂರಲ್ಲಿ ಪ್ರತಿಭಟನೆ

ಸದ್ಯಕ್ಕಿಲ್ಲ “ಡಿ ಗ್ಯಾಂಗ್‌ಗೆ” ರಿಲೀಫ್‌- ದಾಸ ಸೇರಿ 17 ಮಂದಿಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ವ್ಯಕ್ತಿ ಸಾವು

ಖಾಲಿ ಚೊಂಬು ಹಿಡಿದು ಸಿದ್ದರಾಮಯ್ಯನವರ ಬಜೆಟ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬೇಟಿ : ವಿವಿಧ ಸಮಸ್ಯೆಗಳ ಬಗ್ಗೆ ಪರಿಶೀಲನೆ

TAGGED:Tumakuru
Share This Article
Facebook Copy Link Print
Previous Article Mysuru ಎಟಿಎಂಗೆ ಹಣ ತುಂಬಿಸದೇ ವಂಚನೆ ಆರೋಪ, ಮೈಸೂರಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್.
Next Article Ramesh j Ramesh j Ramesh j ಭೂ ದಾಖಲೆಗಳ ಗಣಕಿಕರಣ ಮತ್ತು ರಸ್ತೆ ಅಗಲಿಕರಣಕ್ಕೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up