ಚನ್ನಪಟ್ಟಣ : ತೀವ್ರ ಜಿದ್ದಾ ಜಿದ್ದಿಗೆ ಸಾಕ್ಷಿಯಾಗಿರುವ ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದ್ದು ಇಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಿದರು.
ಇಂದು ಸಿಪಿ ಯೋಗೇಶ್ವರ್ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್ ರೋಡ್ ಶೋ ನಡೆಸಿ ಚನ್ನಪಟ್ಟಣ ತಾಲ್ಲೂಕು ಕಚೇರಿಗೆ ಆಗಮಿಸಿದ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಪವಿಭಾಗಾದಿಕಾರಿ ಬಿಕೆ ಬಿನೋಯ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ನಡೆದ ರೋಡ್ ಶೋ ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿ.ಕೆ ಸುರೇಶ್ ಸೇರಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.