ಕೋಲಾರ, ಜ. 23 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ಸಿ.ಎಸ್.ಷಡಕ್ಷರಿ ಅವರು ಜನೇವರಿ 27 ಸೋಮವಾರದಂದು ಕೋಲಾರ ನಗರಕ್ಕೆ ಆಗಮಿಸಲಿದ್ದು, ಅವರಿಗೆ ಜಿಲ್ಲಾ ಸರಕಾರಿ ನೌಕರರ ಸಂಘದ ವತಿಯಿಂದ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಜಯ್ ಕುಮಾರ್ ಹೇಳಿದರು.ಅವರು ಗುರುವಾರ ನಗರದ ರೋಟರಿ ಕ್ಲಬ್ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ತುರ್ತು ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.
ಸೋಮವಾರ ಸಂಜೆ 5.00 ಘಂಟೆಗೆ ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಅಭಿನಂದನೆ ಸಲ್ಲಿಸಲು ತೀರ್ಮಾನಿಸಲಾಗಿದ್ದು, ಅಭಿನಂದನಾ ಸಮಾರಂಭದಲ್ಲಿ ನೌಕರ ಸಂಘದ ರಾಜ್ಯಧ್ಯಕ್ಷ ಷಡಕ್ಷರಿ ಹಾಗೂ ನೌಕರ ಸಂಘದ ಖಜಾಂಚಿ ಶಿವರುದ್ರಯ್ಯ ಸೇರಿದಂತೆ ರಾಜ್ಯ ಹಾಗೂ ಜಿಲ್ಲೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಇಲಾಖೆಯ ನೌಕರರು ಭಾಗವಹಿಸಿ, ನಮ್ಮ ಒಳಿತಿಗಾಗಿ ಸದಾ ಹೋರಾಟ ನಡೆಸುತ್ತಿರುವ ಷಡಕ್ಷರಿ ಅವರಿಗೆ ಅಭಿನಂದಿಸೋಣ ಎಂದರು.ಎನ್‌ಪಿಸಿ ರದ್ದುಗೊಳಿಸಿ ಓಪಿ ಎಸ್ ಜಾರಿಮಾಡಬೇಕು.
ಎಲ್ಲ ನೌಕರ ಕುಟುಂಬಗಳಿಗೆ ಆರೋಗ್ಯ ರಕ್ಷಣೆಗೆ ಸಂಬಂಧಿಸಿದಂತೆ ಉತ್ತಮ ಯೋಜನೆ ರೂಪಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ರಾಜ್ಯಾಧ್ಯಕ್ಷರ ಮುಂದೆ ಇಲಿದ್ದೇವೆ ಎಂದು ತಿಳಿಸಿದ ಅವರು ಈ ಅಭಿನಂದನಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಮಖ್ಯೆಯಲ್ಲಿ ನೌಕರರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಸರಕಾರಿ ನೌಕರ ಸಂಘದ ಅಧ್ಯಕ್ಷ ಅಜಯ್ ಕುಮಾರ್ ಹಾಗೂ ಸಂಘದ ಪದಾಧಿಕಾರಿಗಳು ತಿಳಿಸಿದರು.
ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸ ರೆಡ್ಡಿ, ಜಿಲ್ಲಾ ಖಜಾಂಚಿ ಮುರಳಿಮೋಹನ್,ಗೌರವಧ್ಯಕ್ಷರಾದ ಕೆ. ಎನ್. ಮಂಜುನಾಥ, ಹಿರಿಯ ಉಪಾಧ್ಯಕ್ಷರಾದ ನಾಗಮಣಿ, ಹರಿಕೃಷ್ಣ, ಡಾ. ತಬಸ್ಸುಮ್, ಕೆ. ವಿಜಯ್ ಕಾರ್ಯದರ್ಶಿ ಸತೀಶ್ ಕುಮಾರ್ ಸೇರಿದಂತೆ ಜಿಲ್ಲಾ ಸಂಘದ ಪದಾಧಿಕಾರಿಗಳು ವೃಂದಸಂಘಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.