Bengaluru : ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಲು ಮೆಟ್ರೋ ರೈಲಿಗೆ ಜನ ಪ್ರವಾಹವೇ ನುಗ್ಗಿದ್ದು, ಸ್ಟೇಷನ್‌ಗಳಲ್ಲಿ ನೂಕು ನುಗ್ಗಲು ಕಂಡು ಬಂದಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ನೇರಳೆ ಮಾರ್ಗದ 2 ಮೆಟ್ರೋ ನಿಲ್ದಾಣಗಳಾದ ವಿಧಾನಸೌಧ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್‌ಗಳನ್ನು ಬಂದ್ ಮಾಡಲಾಗಿದೆ.
ʼʼಮೆಟ್ರೋ ರೈಲುಗಳಲ್ಲೂ ಜನಸಾಗರವೇ ಹರಿದು ಬರುತ್ತಿರುವುದರಿಂದ ಯಾವುದೇ ಅಪಾಯ, ಕಾಲ್ತುಳಿತ ಸಂಭವಿಸಬಾರದು ಎಂಬ ಉದ್ದೇಶದಿಂದ 2 ಮೆಟ್ರೋ ನಿಲ್ದಾಣಗಳ ಸೇವೆ ನಿಲ್ಲಿಸಲಾಗಿದೆ. ಕಬ್ಬನ್ ಪಾರ್ಕ್, ವಿಧಾನಸೌಧ ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ‘ನಮ್ಮ ಮೆಟ್ರೋ’ ನೇರಳೆ ಮಾರ್ಗದಲ್ಲಿರುವ ನಿಲ್ದಾಣಗಳಲ್ಲಿ ಸಂಜೆ 4.30ರಿಂದಲೇ ಸೇವೆ ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶದವರೆಗೂ ಈ ಎರಡು ನಿಲ್ದಾಣಗಳಲ್ಲಿ ಮೆಟ್ರೋ ರೈಲುಗಳು ನಿಲ್ಲುವುದಿಲ್ಲʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

