ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ದರ್ಶನ್ (Darshan) ಗ್ಯಾಂಗ್ ಬಂಧನವಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್‌ವುಡ್ (Sandalwood) ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ (Chikkanna) ಪೊಲೀಸರು ನೋಟಿಸ್ ನೀಡಿದ್ದಾರೆ.
ಕೊಲೆ ನಡೆದ ಜೂನ್ 8 ಶನಿವಾರದಂದು ಡಿ ಗ್ಯಾಂಗ್ ಸದಸ್ಯರು ಆರ್‌ಆರ್ ನಗರದ ಸ್ಟೋನಿಬ್ರೂಕ್ ಪಬ್‌ನಲ್ಲಿ ಮಧ್ಯಾಹ್ನದಿಂದ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ಚಿಕ್ಕಣ್ಣ ಭಾಗಿಯಾಗಿದ್ದರು. ಇದನ್ನೂ ಓದಿ: ದರ್ಶನ್ ಬಂಧನಕ್ಕೆ ಮನನೊಂದು ಅಭಿಮಾನಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ

ಸಂಜೆ ವೇಳೆಗೆ ಸ್ವಲ್ಪ ಕೆಲಸವಿದೆ ಎಂದು ಹೇಳಿ ದರ್ಶನ್ ಹೊರಟಿದ್ದರು. ರೇಣುಕಾಸ್ವಾಮಿ ಕೊಲೆಯಾದ ದಿನವೇ ದರ್ಶನ್ ಜೊತೆ ಪಾರ್ಟಿ ಮಾಡಿದ್ದರಿಂದ ಪೊಲೀಸರು ಈಗ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಪೋಕ್ಸೊ ಕೇಸ್- ತನಿಖಾಧಿಕಾರಿಯಾಗಿ ಪುನೀತ್ ನೇಮಕ, ಅಧಿಕಾರಿಯಿಂದ ಬಿಎಸ್‌ವೈ ವಿಚಾರಣೆ
ಕೊಲೆ ವಿಚಾರವಾಗಿ ಪಬ್‌ನಲ್ಲಿ ಏನಾದರೂ ಚರ್ಚೆ ನಡೆದಿತ್ತಾ ಎಂಬುದರ ಬಗ್ಗೆ ಮಾಹಿತಿ ಪಡೆಯುವ ಸಾಧ್ಯತೆಯಿದೆ. ಈಗ ನೋಟಿಸ್ ಕೊಟ್ಟು ಕರೆಸಬೇಕೇ? ಬೇಡವೇ ಎಂಬುದರ ಬಗ್ಗೆ ಪೊಲೀಸರು ಹಿರಿಯ ಅಧಿಕಾರಿಗಳ ಸಲಹೆ ಕೇಳಿದ್ದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗದ ಕಾರಣ ಚಿಕ್ಕಣ್ಣ ಅವರನ್ನು ಬಂಧನ ಮಾಡುವುದಿಲ್ಲ. ಬದಲಾಗಿ ಸಾಕ್ಷಿಯನ್ನಾಗಿ ಪರಿಗಣಿಸಲಿದ್ದಾರೆ. ಕೊಲೆಯ ಬಗ್ಗೆ ಮಾಹಿತಿ ಇಲ್ಲದೇ ಇದ್ದರೂ ಕೂಡ, ಪಾರ್ಟಿಯಲ್ಲಿದ್ದ ಎಂಬ ಕಾರಣಕ್ಕೆ ಸಾಕ್ಷಿಯಾಗಿ ಪರಿಗಣನೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಜೂನ್ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು