By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗೃಹ ಸಚಿವರ ತವರಿನಲ್ಲಿ ದಲಿತರ ಗೋಳನ್ನು ಕೇಳುವವರು ಯಾರು..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಗೃಹ ಸಚಿವರ ತವರಿನಲ್ಲಿ ದಲಿತರ ಗೋಳನ್ನು ಕೇಳುವವರು ಯಾರು..?

ತುಮಕೂರು-Tumakuruರಾಜ್ಯ-Karnataka

ಗೃಹ ಸಚಿವರ ತವರಿನಲ್ಲಿ ದಲಿತರ ಗೋಳನ್ನು ಕೇಳುವವರು ಯಾರು..?

Dalits in the home minister's home town.

Published December 24, 2025
Share
2 Min Read
Dalit Dalit Dalit
SHARE

ತಿಪಟೂರು, ಡಿಸೆಂಬರ್ 24: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರ ತವರಿನ ನಗರವೆನ್ನಲಾದ ತಿಪಟೂರಿನ 31ನೇ ವಾರ್ಡ್‌ನ ಗೊರಗೊಂಡನಹಳ್ಳಿ ಎ.ಕೆ. ಕಾಲೋನಿಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ, ದಬ್ಬಾಳಿಕೆ ಹಾಗೂ ಪಾಳೆಗಾರಿಕೆ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸವರ್ಣಿಯರ ಹಿಂಸಾಚಾರದಿಂದ ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿಗೆ ದಲಿತ ಕುಟುಂಬಗಳು ತಲುಪಿವೆ.

ಸರ್ವೆ ನಂಬರ್ 93/4A2ರಲ್ಲಿ ದಲಿತರು ರಸ್ತೆಯಲ್ಲಿ ಓಡಾಡದಂತೆ ಶೆಡ್ಡು ಹಾಗೂ ತಂತಿ ಬೇಲಿ ಕಂಬಗಳನ್ನು ನಿರ್ಮಿಸಿ ರಸ್ತೆ ಅಡ್ಡಗಟ್ಟಲಾಗಿದೆ ಎಂದು ಆರೋಪಿಸಲಾಗಿದೆ. ಈ ಅಕ್ರಮ ನಿರ್ಮಾಣಗಳನ್ನು ಗ್ರಾಮದ ಚೇರ್ಮನ್ ಶಿವನಂಜಪ್ಪ ಅವರ ಮಕ್ಕಳು ಹಾಗೂ ಮೊಮ್ಮಕ್ಕಳು ನಡೆಸಿದ್ದಾರೆ ಎನ್ನಲಾಗಿದೆ. ಇದರಿಂದ ದಲಿತರು ದಿನನಿತ್ಯ ರಸ್ತೆ ಬಳಸಲು ಸಾಧ್ಯವಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ.

ಈ ಕುರಿತು ತಹಶೀಲ್ದಾರ್ ಹಾಗೂ ನಗರಸಭೆಗೆ ದೂರು ನೀಡಲಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಸರ್ವೆ ಇಲಾಖೆ ಸ್ಥಳಕ್ಕೆ ಆಗಮಿಸಿ ಜಾಗದ ನಕ್ಷೆ ಗುರುತಿಸಿತ್ತು. ನಂತರ ನಡೆದ ಪರಿಶೀಲನೆಯಲ್ಲಿ ರಸ್ತೆ, ದಲಿತರ ಜಮೀನು–ನಿವೇಶನ ಹಾಗೂ ಕೆಂಪಯ್ಯ ಕುಟುಂಬಕ್ಕೆ ಸೇರಿದ ಜಮೀನು ಆಕ್ರಮಣಗೊಂಡಿರುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಶಿವನಂಜಪ್ಪ ಕುಟುಂಬದವರಿಗೆ ನೋಟಿಸ್ ಜಾರಿಗೊಂಡರೂ, ಸರ್ವೆ ಸಂದರ್ಭದಲ್ಲಿಯೇ ಆರೋಪಿತರು ಹಾಜರಾಗಿರಲಿಲ್ಲ ಎಂದು ತಿಳಿದುಬಂದಿದೆ.

ಇದರಿಂದಾಗಿ ಶಿವನಂಜಪ್ಪ ಕುಟುಂಬದ ಸದಸ್ಯರಾದ ರಂಗನಾಥ, ದೊರೆರಾಜು, ಪವನ್ ಕುಮಾರ್, ಮೋಹನ್ ಕುಮಾರ್ ಸೇರಿದಂತೆ ಇತರರ ವಿರುದ್ಧ ಪರಿಶಿಷ್ಟ ಜಾತಿಗಳ ಮೇಲೆ ನಡೆದ ದೌರ್ಜನ್ಯ ಪ್ರಕರಣ ಹಾಗೂ ಕರ್ನಾಟಕ ವಿಶೇಷ ಭೂ ಕಬಳಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ದಲಿತ ಜನಾಂಗದ ಕೆಂಪಯ್ಯ ಕುಟುಂಬದ ಕಾಂತರಾಜು ಮನವಿ ಮಾಡಿದ್ದಾರೆ.

ಅಲ್ಲದೆ, ದಲಿತರಿಗೆ ಸೇರಿರುವ ಭೂಮಿಯಲ್ಲಿ ಹಾಗೂ ರಸ್ತೆಗೆ ಅಡ್ಡಲಾಗಿ ಅಕ್ರಮವಾಗಿ ಹಸುವಿನ ಸಾಕಾಣಿಕೆ ಶೆಡ್ಡು ನಿರ್ಮಿಸಿ, ತಂತಿ ಬೇಲಿ ಹಾಕಲಾಗಿದೆ. ಶೆಡ್ಡಿನಿಂದ ಹೊರಡುವ ಗಂಜಲ ಹಾಗೂ ಕಸದ ನೀರನ್ನು ನೇರವಾಗಿ ಚರಂಡಿ ಮತ್ತು ರಸ್ತೆಗೆ ಹರಿಸಲಾಗುತ್ತಿದೆ. ದಲಿತರು ವಾಸಿಸುವ ಮನೆಗಳ ಪಕ್ಕದಲ್ಲೇ ತಿಪ್ಪೆಗುಂಡಿ ನಿರ್ಮಾಣಗೊಂಡಿರುವುದರಿಂದ ನೊಣ–ಸೊಳ್ಳೆಗಳ ಕಾಟ ಹೆಚ್ಚಾಗಿ, ಎ.ಕೆ. ಕಾಲೋನಿ ಸಾಂಕ್ರಾಮಿಕ ರೋಗಗಳ ತಾಣವಾಗಿರುವ ಸ್ಥಿತಿಗೆ ತಲುಪಿದೆ. ವಯೋವೃದ್ಧರು, ಮಹಿಳೆಯರು ಹಾಗೂ ಚಿಕ್ಕ ಮಕ್ಕಳು ದಿನನಿತ್ಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ಆತಂಕಕಾರಿ ಚಿತ್ರಣ ಕಂಡುಬಂದಿದೆ.

ಸುಮಾರು ಮೂರು ತಿಂಗಳ ಬಳಿಕ ಇಂದು ಸರ್ವೆ ಇಲಾಖೆ ಹಾಗೂ ನಗರಸಭೆಯ ಕೆಲ ಸಿಬ್ಬಂದಿ ಪೊಲೀಸ್ ಬಂದೋಬಸ್ತಿನಲ್ಲಿ ಸ್ಥಳಕ್ಕೆ ಆಗಮಿಸಿ ಸರ್ವೆ ನಡೆಸಿ ಕಲ್ಲು ಹಾಕಿದ್ದಾರೆ. ಜಾಗ ಒತ್ತುವರಿ ಆಗಿರುವುದನ್ನು ದಲಿತ ಕಾಲೋನಿಯ ಮುಖಂಡರು ಹಾಗೂ ಸ್ಥಳದಲ್ಲಿದ್ದ ದಲಿತಪರ ಸಂಘಟನೆಗಳ ನಾಯಕರಿಗೆ ತಿಳಿಸಲಾಗಿದೆ.

ಈ ಸಮಸ್ಯೆಯನ್ನು ತ್ವರಿತವಾಗಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ನಗರಸಭೆ ಪೌರಾಯುಕ್ತರು ಪರಿಹರಿಸದಿದ್ದಲ್ಲಿ ಸಂಬಂಧಪಟ್ಟ ಇಲಾಖೆ ಮುಂಭಾಗ ದಯಾಮರಣಕ್ಕೆ ಮನವಿ ಸಲ್ಲಿಸುವುದಾಗಿ ಎ.ಕೆ. ಕಾಲೋನಿಯ ದಲಿತರು ಹಾಗೂ ಕೆಂಪಯ್ಯ ಕುಟುಂಬದವರು ಎಚ್ಚರಿಕೆ ನೀಡಿದ್ದಾರೆ.

ಈಗಲಾದರೂ ಒತ್ತುವರಿ ತೆರವುಗೊಳಿಸಿ, ರಸ್ತೆಗೆ ಅಡ್ಡವಾಗಿ ನಿರ್ಮಿಸಿರುವ ಶೆಡ್‌ಗಳನ್ನು ತೆರವುಗೊಳಿಸಲು ಜಿಲ್ಲಾ–ತಾಲೂಕು ಆಡಳಿತ ಹಾಗೂ ನಗರಸಭೆ ಮುಂದಾಗುತ್ತದೆಯೇ? ಅಥವಾ ಪಟ್ಟಭದ್ರ ಹಿತಾಸಕ್ತಿಗಳಿಗೆ ಮಣೆ ಹಾಕುತ್ತದೆಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಉದ್ಭವಿಸಿವೆ. ಮುಂದಿನ ದಿನಗಳಲ್ಲಿ ಏನಾಗಲಿದೆ ಎಂಬುದು ಕಾದು ನೋಡಬೇಕಾಗಿದೆ.

ವರದಿ: ಮಂಜುನಾಥ್ ಡಿ., ತಿಪಟೂರು

You Might Also Like

ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿದ ಅನಿಲ್ ಕುಂಬ್ಳೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

ದ್ವೇಷ ಭಾಷಣ ನಿಷೇಧ ಕಾಯ್ದೆ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ಮುಂದಾದ ಪ್ರಮೋದ್ ಮುತಾಲಿಕ್

ಆನ್‍ಲೈನ್ ಆಪ್‍ನಲ್ಲಿ ಹಣ ಹೂಡಿ ನಷ್ಟ – ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್ ಗಾಂಧಿ

TAGGED:Dalits
Share This Article
Facebook Copy Link Print
Previous Article Rishab Rishab Rishab ಮಂತ್ರಾಲಯದಲ್ಲಿ ಕುಟುಂಬ ಸಮೇತ ರಾಯರ ದರ್ಶನ ಪಡೆದ ರಿಷಬ್ ಶೆಟ್ಟಿ
Next Article Raichur Raichur Raichur ರಾಯಚೂರು ಜಿಲ್ಲೆಯ ಗ್ರಾಮಗಳಲ್ಲಿ ರಾಜರೋಷವಾಗಿ ಅಕ್ರಮ ಮಧ್ಯ ಮಾರಾಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up