ಬಳ್ಳಾರಿ : ನಟ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಮುಂಜಾನೆ 10 ಗಂಟೆ ಸುಮಾರಿಗೆ ಅವರು ಬಳ್ಳಾರಿ ಜೈಲು ತಲುಪಿದ್ದಾರೆ. ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಿಂದ ಅವರನ್ನು ಕರೆದುಕೊಂಡು ಹೋಗಲಾಯಿತು. ಸುಮಾರು ಐದೂವರೆ ಗಂಟೆಗಳ ಪ್ರಯಾಣದ ಬಳಿಕ ಅವರನ್ನು ಬಳ್ಳಾರಿಗೆ ತಲುಪಿದ್ದಾರೆ. ಕಾರಾಗೃಹದಲ್ಲಿ ಬಳಿ ಪೊಲೀಸ್ ಭದ್ರತೆ ಸೇರಿ ಎಲ್ಲಾ ಸಿದ್ಧತೆಗಳನ್ನು ಜೈಲ್ ಅಧಿಕಾರಿಗಳು ಕೈಗೊಂಡಿದ್ದಾರೆ. ಪೊಲೀಸರು ಬೆಂಗಳೂರು – ತುಮಕೂರು – ಚಳ್ಳಕೆರೆ – ಮೊಳಕಾಲ್ಮುರು – ರಾಂಪುರ ಮಾರ್ಗವಾಗಿಯೇ ಬಳ್ಳಾರಿಗೆ ಪ್ರಯಾಣಿಸಿದ್ದರು.
ಕಾರಗೃಹಕ್ಕೆ ದರ್ಶನ್ ಆಗಮನದಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಬರಯವ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕಾರಗೃಹಕ್ಕೆ ತೆರಳುವ ಮಾರ್ಗದ ಎರಡು ಬದಿಯಲ್ಲಿ ಬ್ಯಾರಿಕೇಡ್ ಗಳನ್ನು ನಿರ್ಮಿಸಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ನಟ ದರ್ಶನ್ ಅವರು, ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರ ಹತ್ಯೆ ಕೇಸ್ ನಲ್ಲಿ ಜೂನ್ ತಿಂಗಳಲ್ಲಿ ಬಂಧನಕ್ಕೊಳಗಾಗಿದ್ದರು. ಅವರ ಜೊತೆಗೆ ಕೊಲೆಗೆ ಸಹಕರಿಸಿದ ಆರೋಪದಡಿ ದರ್ಶನ್ ಸೇರಿ ಒಟ್ಟು 17 ಆರೋಪಿಗಳ ಬಂಧನವಾಗಿದೆ. ಅಲ್ಲಿಂದ ಇಲ್ಲಿಯವರೆಗೆ ಅವರು ಮೊದಲು ಪೊಲೀಸ್ ಬಂಧನದಲ್ಲಿದ್ದರು. ಆನಂತರ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ವಿಚಾರ ಹೊರಬಿದ್ದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯ ಮೇರೆಗೆ, ಬೆಂಗಳೂರಿನ ನ್ಯಾಯಾಲಯದಿಂದ ಅನುಮತಿ ಪಡೆದು ಜೈಲಿನಲ್ಲಿರುವ ದರ್ಶನ್ ಹಾಗೂ ಅವರ ಸ್ನೇಹಿತರ ತಂಡವನ್ನು ಬೇರೆ ಬೇರೆ ಜೈಲುಗಳಿಗೆ ಎಸಿಪಿ ಭರತ್ ರೆಡ್ಡಿಯವರ ನೇತೃತ್ವದಲ್ಲಿ ಸ್ಥಳಾಂತರಿಸಲಾಗುತ್ತಿದೆ.
ಲಘು ಲಾಠಿ ಚಾರ್ಜ್
ನೆಚ್ಚಿನ ನಟನನ್ನು ನೋಡಲು ಜಮಾಯಿಸಿದ್ದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಯಾವ್ಯಾವ ಜೈಲಿಗೆ ಯಾರು?
1.ಬಳ್ಳಾರಿ ಜೈಲಿಗೆ ದರ್ಶನ್
2.ಮೈಸೂರು ಜೈಲಿಗೆ ಪವನ್ , ರಾಘವೇಂದ್ರ, ನಂದೀಶ್
3.ಶಿವಮೊಗ್ಗ ಜೈಲಿಗೆ ಜಗದೀಶ್ , ಲಕ್ಷ್ಮಣ್
4.ಧಾರವಾಡ ಜೈಲಿಗೆ ಧನರಾಜ್
5.ವಿಜಯಪುರ ಜೈಲಿಗೆ ವಿನಯ್
6.ಕಲಬುರುಗಿ ಜೈಲಿಗೆ ನಾಗರಾಜ್
- ಬೆಳಗಾವಿ ಜೈಲಿಗೆ ಪ್ರದೂ

