ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, 2025ನೇ ವರ್ಷವನ್ನು ಸ್ವಾಗತಿಸಲು ಇಡೀ ಪ್ರಪಂಚ ಸಜ್ಜಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕೊಂಡಿದೆ.
ಈ ನಡುವೆ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ವಿದೇಶಕ್ಕೆ ಹಾರಿದ್ದಾರೆ. ಹೌದು ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದು, ವಿದೇಶದಲ್ಲಿ ಈ ಬಾರಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗಲಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬೆಳಿಗ್ಗೆಯೇ ಕುಟುಂಬದವರೊಂದಿಗೆ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ ಎನ್ನಲಾಗಿದ್ದು. ಕೆನಡಾ, ಟರ್ಕಿ ಪ್ರವಾಸ ಕೈಗೊಂಡಿದ್ದಾರೆ. ನಾಲ್ಕು ದಿನಗಳ ಕಾಲ ವಿದೇಶದಲ್ಲಿರಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಜನವರಿ 4 ರಂದು ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ವಿಶ್ರಾಂತಿ ಮೊರೆ ಹೋದ ಸಿಎಂ :
ಬಿಡುವಿಲ್ಲದ ಕಾರ್ಯಕ್ರಮ ಹಾಗೂ ಪ್ರವಾಸದಿಂದ ದಣಿದಿರುವ ಸಿಎಂ ಸಿದ್ದರಾಮಯ್ಯ ಈಗಾಗಲೇ ವಿಶ್ರಾಂತಿ ಮೊರೆ ಹೋಗಿದ್ದಾರೆ. ಭಾನುವಾರದಿಂದ ಜ.2ರ ವರೆಗೆ ಸಿಎಂ ಸಿದ್ದರಾಮಯ್ಯ ವಿಶ್ರಾಂತಿಯಲ್ಲಿರಲಿದ್ದು, ಯಾವುದೇ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಿಲ್ಲ. ಜ. 2ರ ಬಳಿಕ ಬಜೆಟ್ ಪೂರ್ವಬಾವಿ ಸಭೆಗಳನ್ನು ನಡೆಸಲಿದ್ದಾರೆ. ಡಿಸಿಎಂ ಕೂಡ ಇಯರ್ ಎಂಡ್ ವಿದೇಶ ಪ್ರವಾಸ ಕೈಗೊಂಡಿದ್ದಾರೆ.

