ಬೆಂಗಳೂರು: 18 ವರ್ಷಗಳ ಬಳಿಕ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡು ಸಂಭ್ರಮದಲ್ಲಿ ಮುಳುಗೇಳಬೇಕಿದ್ದ ಬೆಂಗಳೂರಿನಲ್ಲಿ ಸೂತಕ ಮನೆ ಮಾಡಿದೆ . ಆರ್‌ಸಿಬಿ ವಿಜಯೋತ್ಸವಕ್ಕೆ ಸಜ್ಜಾಗಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಘಾತ ವ್ಯಕ್ತಪಡಿಸಿ, ಜೀವಕ್ಕಿಂತ ಅಭಿಮಾನ ದೊಡ್ಡದಲ್ಲ ಎಂದು ಎಕ್ಸ್‌ನಲ್ಲಿ ಫ್ಯಾನ್ಸ್‌ಗೆ ಸಂದೇಶ ನೀಡಿದ್ದಾರೆ.
ʼʼಆರ್‌ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆʼʼ ಎಂದು ಅವರು ಬರೆದುಕೊಂಡಿದ್ದಾರೆ.
- ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
- ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
- ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
- ಆನ್‌ಲೈನ್ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
- ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ

