ನವದೆಹಲಿ: ಜ್ಞಾನವಾಪಿ ಮಸೀದಿ ಬಗ್ಗೆ ವಿಡಿಯೋಗ್ರಾಫಿಕ್ ಸಮೀಕ್ಷೆಗೆ ಅನುಮತಿ ನೀಡಿದ ದಿನದಿಂದ ನ್ಯಾಯಾಧೀಶ ರವಿಕುಮಾರ್ ದಿವಾಕರ್ (Ravi Kumar Diwakar) ಅವರಿಗೆ ಮತ್ತು ಅವರ ಕುಟುಂಬಕ್ಕೆ ಬೆದರಿಕೆಗಳು ಬರುತ್ತಿದೆ ಎಂದು ಹೇಳಲಾಗಿದೆ.
ವಿವಾದಿತ ಜ್ಞಾನವಾಪಿ ಮಸೀದಿ (Gyanvapi Masjid) ಬಗ್ಗೆ ವಿಡಿಯೋಗ್ರಾಫಿಕ್ ಸಮೀಕ್ಷೆಗೆ ಅನುಮತಿ ನೀಡಿದ ಭದ್ರತೆಯನ್ನು ಹೆಚ್ಚಿಸಲು NIA (National Investigation Agency Government of India) ವಿಶೇಷ ನ್ಯಾಯಾಲಯವು ಅಲಹಾಬಾದ್ ಹೈಕೋರ್ಟ್‌ಗೆ ವಿನಂತಿ ಮಾಡಿಕೊಂಡಿದೆ. ಎನ್‌ಐಎ ನ್ಯಾಯಾಲಯದ ನ್ಯಾಯಾಧೀಶ ವಿವೇಕಾನಂದ ಶರಣ್ ತ್ರಿಪಾಠಿ ಅವರು ಈ ಬಗ್ಗೆ ಅಲಹಾಬಾದ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಪತ್ರ ಬರೆದು ನ್ಯಾಯಾಧೀಶ ದಿವಾಕರ್‌ಗೆ ಹೆಚ್ಚಿನ ರಕ್ಷಣೆ ನೀಡುವಂತೆ ಕೋರಿದ್ದಾರೆ.
ಈಗಾಗಲೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದಿವಾಕರ್‌ಗೆ ಬೆದರಿಕೆ ಹಾಕಿದ್ದಕ್ಕಾಗಿ ಅದ್ನಾನ್ ಖಾನ್ ಎಂಬ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಘಟನೆ ನಡೆದ ಕೆಲವು ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಇನ್ನು ನ್ಯಾಯಾಧೀಶ ತ್ರಿಪಾಠಿ ಅವರು ಅಲಹಾಬಾದ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಬರೆದ ಪತ್ರದಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳು ನ್ಯಾಯಾಧೀಶ ದಿವಾಕರ್ ಅವರನ್ನು ಕೊಲ್ಲಲು ಸಂಚು ರೂಪಿಸುತ್ತಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಇದನ್ನೂ ಓದಿ:ಕಲ್ಲಕುರಿಚಿಯಲ್ಲಿ ಸಾವಿನ ಸಂಖ್ಯೆ 55 ಕ್ಕೆ ಏರಿಕೆ, 100 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು
ಇದು ಸೂಕ್ಷ್ಮ ವಿಷಯವಾಗಿದೆ. ಅದ್ನಾನ್‌ನ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಅದು ಅಹಿತಕರ ಘಟನೆಗೆ ಕಾರಣವಾಗಬಹುದು ಎಂದು ಹೇಳಿದ್ದಾರೆ. ನ್ಯಾಯಾಧೀಶ ದಿವಾಕರ್ ಈಗ ಬರೇಲಿಯಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾಗಿದ್ದಾರೆ. ಇದಕ್ಕೂ ಮುನ್ನ ಅವರು ಯುಪಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ತಮ್ಮ ಪ್ರಸ್ತುತ ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ನ್ಯಾಯಾಧೀಶ ದಿವಾಕರ್ ಅವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ, ಅಲಹಾಬಾದ್ ಹೈಕೋರ್ಟ್ ಆದೇಶದ ನಂತರ, ನನ್ನ ಕುಟುಂಬ ಮತ್ತು ನನಗೆ ಭದ್ರತೆಯನ್ನು ಒದಗಿಸಲಾಯಿತು, ಆದರೆ ಪ್ರಸ್ತುತ ಅದು ಅಸಮರ್ಪಕವಾಗಿದೆ ಎಂದು ತೋರುತ್ತದೆ. ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗಳಿಂದ ನನ್ನನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ. ಹಾಗಾಗಿ ನನಗೆ ಮತ್ತು ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಲು ಈ ಪತ್ರದ ಮೂಲಕ ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ನಿರ್ಮಾಣ ಹಂತದಲ್ಲಿದ್ದ YSR ಕಾಂಗ್ರೆಸ್ ಪಕ್ಷದ ಕಚೇರಿ ನೆಲಸಮ
25 ಏಪ್ರಿಲ್ 2024 ರಂದು, ನ್ಯಾಯಾಧೀಶ ದಿವಾಕರ್ ಅವರಿಗೆ ಕೊಲೆ ಬೆದರಿಕೆ ಕರೆಗಳು ಕೂಡ ಬಂದಿದೆ. ಇನ್ನು ಈ ಬೆದರಿಕೆ ಬಗ್ಗೆ ತನಿಖೆ ನಡೆಸಬೇಕು ಎಂದು ಬರೇಲಿ ಪೊಲೀಸರು ಹೇಳಿದ್ದಾರೆ.

