ನವದೆಹಲಿ, ಆಗಸ್ಟ್ 20: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾರ ಅಧಿಕೃತ ನಿವಾಸದಲ್ಲಿ ನಡೆಯುತ್ತಿರುವ ‘ಜನ್ ಸುನ್ವಾಯಿ ’ ಕಾರ್ಯಕ್ರಮದ ವೇಳೆ ಸಿಎಂ ರೇಖಾ ಮೇಲೆ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸಿವಿಲ್ ಲೈನ್ಸ್‌ನ ಸಿಎಂ ನಿವಾಸದಲ್ಲಿ ಜಾನ್ ಸುನ್ವಾಯಿ ಸಮಯದಲ್ಲಿ ಒಂದು ದುರ್ಘಟನೆ ಸಂಭವಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಲ್ಲೆಯನ್ನು 35 ವರ್ಷದ ವ್ಯಕ್ತಿಯೊಬ್ಬ ನಡೆಸಿದ್ದು, ಮುಖ್ಯಮಂತ್ರಿಯ ಮೇಲೆ ಹಲ್ಲೆ ನಡೆಸುವ ಮೊದಲು ಕೆಲವು ಕಾಗದಪತ್ರಗಳನ್ನು ನೀಡಿದ್ದಾನೆ. ಆಕೆಯ ಕೂದಲನ್ನು ಎಳೆದು ಕಪಾಳಮೋಕ್ಷ ಮಾಡಿದ್ದಾನೆ. ಗುಪ್ತಾಗೆ ಯಾವುದೇ ಗಾಯಗಳಾಗಿಲ್ಲದಿದ್ದರೂ, ಈ ಘಟನೆ ಅವರನ್ನು ಆಘಾತಕ್ಕೀಡು ಮಾಡಿದೆ. ದಾಳಿಕೋರನನ್ನು ಈಗ ದೆಹಲಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ
ಭಾರತೀಯ ಜನತಾ ಪಕ್ಷದ ದೆಹಲಿ ಘಟಕದ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಗುಪ್ತಾ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ದೂರುದಾರನಂತೆ ಬಂದಿದ್ದ ವ್ಯಕ್ತಿಯೊಬ್ಬ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದರ್ ಯಾದವ್ ಈ ದಾಳಿಯನ್ನು ಖಂಡಿಸಿದ್ದು, ಘಟನೆಯನ್ನು ದುರದೃಷ್ಟಕರ ಎಂದು ಕರೆದಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಅವರು, ದೆಹಲಿಯ ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು, ಮುಖ್ಯಮಂತ್ರಿ ಸುರಕ್ಷಿತವಾಗಿಲ್ಲದಿದ್ದರೆ, ರಾಷ್ಟ್ರ ರಾಜಧಾನಿಯಲ್ಲಿ ಸಾಮಾನ್ಯ ವ್ಯಕ್ತಿ ಹೇಗೆ ಸುರಕ್ಷಿತವಾಗಿರಲು ಸಾಧ್ಯ ಎಂದು ಕೇಳಿದರು.
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
- ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

