ಬೆಂಗಳೂರು: ಮಂಡ್ಯದ (Mandya) ನೂತನ ಸಂಸದ, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ದೆಹಲಿಗೆ ತೆರಳಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶ ಮಂಗಳವಅರ ಹೊರಬಿದಿದ್ದು, ಇಂದು ಸಂಜೆ ಖಾಸಗಿ ಹೋಟೆಲಿನಲ್ಲಿ ಎನ್‌ಡಿಎ (NDA) ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಭಾಗವಹಿಸಲು ಕುಮಾರಸ್ವಾಮಿ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದರು. ಇದನ್ನೂ ಓದಿ: ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಜೈಕಾರ – ಆರೋಪಿ ಬಂಧನ
ನೂತನವಾಗಿ ಆಯ್ಕೆ ಆಗಿರುವ ಮಿತ್ರ ಪಕ್ಷಗಳ ನಾಯಕರು ದೆಹಲಿಗೆ ಬರುವಂತೆ ಅಮಿತ್ ಶಾ ಆಹ್ವಾನ ನೀಡಿದ್ದಾರೆ.. ಇದನ್ನೂ ಓದಿ: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಕರ್ನಾಟಕದ ಆರು ಮಂದಿ ಟಾಪರ್ಸ್
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 293 ಸ್ಥಾನಗಳನ್ನು ಗೆದ್ದರೆ ಇಂಡಿಯಾ (INDIA) ಮೈತ್ರಿಕೂಟ 234 ಸ್ಥಾನಗಳನ್ನು ಗೆದ್ದುಕೊಂಡಿದೆ. ಸರ್ಕಾರ ರಚನೆಗೆ 272 ಸ್ಥಾನಗಳ ಅಗತ್ಯವಿದೆ. . ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ ಮುನ್ಸೂಚನೆ