ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜೊತೆಗೆ ಸೊಳೆಗಳ ಕಾಟ ಹೆಚ್ಚಾಗುತ್ತಿದ್ದು, ಇತ್ತ ಡೆಂಗ್ಯೂ (Dengue) ಪ್ರಕರಣಗಳು ಹೆಚ್ಚಾಗುತ್ತಿವೆ.
ರಾಜ್ಯದಲ್ಲಿ 6000ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಈ ವರೆಗೆ ಒಟ್ಟು 6187 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಬಿಬಿಎಂಪಿ ಹೊರತು ಪಡಿಸಿ ರಾಜ್ಯದಲ್ಲಿ 4624 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ.
ಸದ್ಯ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಹತೋಟಿಗೆ ಸಿಗದೇ ಪ್ರಕರಣಗಳು ಮುನ್ನುಗುತ್ತಿವೆ. ಅಲ್ಲದೇ ಬಿಬಿಎಂಪಿ ವ್ಯಾಪ್ತಿಯಲ್ಲೇ 1563 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.
ಇವರೆಗೂ ರಾಜ್ಯದಲ್ಲಿ ಡೆಂಗ್ಯೂಗೆ 5 ಮಂದಿ ಸಾವನ್ನಪ್ಪಿದ್ದಾರೆ. ಇದರ ಜೊತೆ ಚಿಕನ್‌ಗುನ್ಯಾ ಹೆಚ್ಚಾಗಿದ್ದು, ಈವರೆಗೂ ರಾಜ್ಯದಲ್ಲಿ ಒಟ್ಟು 912 ಚಿಕನ್ ಗುನ್ಯಾ ಪ್ರಕರಣಗಳು ವರದಿಯಾಗಿದೆ.