ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು(Devarajegowda) ಹಿರಿಯೂರು ಪೊಲೀಸರು (Hiriyur Police)ವಶಕ್ಕೆ ಪಡೆದಿದ್ದು, ಇಂದು ನ್ಯಾಯಾಧೀಶರ (Judge)ಮುಂದೆ ಹಾಜರಾಗಲಿದ್ದಾರೆ.
ಪೆನ್‌ಡ್ರೈವ್ ಪ್ರಕರಣದಲ್ಲಿ ದೇವರಾಜೇಗೌಡ ಬ್ಯಾಗ್ ಸಮೇತ ಇನ್ನೋವಾ ಕಾರಿನಲ್ಲಿ ಎಸ್ಕೇಪ್ ಆಗಲು ಯತ್ನಿಸಿದ್ದ ವೇಳೆ ಹೊಳೆನರಸೀಪುರ ಪೊಲೀಸರ ಮಾಹಿತಿ ಮೇರೆಗೆ ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ ದೇವರಾಜೇಗೌಡರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ:ಬೆಂಗಳೂರಲ್ಲಿ ಮಳೆ ಅಬ್ಬರ; ಧರೆಗುರುಳಿದ ಮರಗಳು, ಮನೆಗಳಿಗೆ ನುಗ್ಗಿದ ನೀರು
ಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಕಾಳಿಕೃಷ್ಣ ನೇತೃತ್ವದಲ್ಲಿ ದೇವರಾಜೇಗೌಡರನ್ನು ವಶಕ್ಕೆ ಪಡೆದಿದ್ದು, ಬಳಿಕ ಎಸ್‌ಐ ಅರುಣ್ ನೇತೃತ್ವದಲ್ಲಿ ಹಾಸನ ಪೊಲೀಸರು ದೇವರಾಜೇಗೌಡರನ್ನು ವಶಕ್ಕೆ ಪಡೆದು ಹೊಳೆನರಸೀಪುರಕ್ಕೆ ಕರೆದೊಯ್ದಿದ್ದಾರೆ. ಅರಕಲಗೂಡು, ಹಳ್ಳಿಮೈಸೂರು ಹಾಗೂ ಬಾಣಾವರ ಪಿಎಸ್‌ಐಗಳು ದೇವರಾಜೇಗೌಡರನ್ನು ಕರೆತಂದು ಹೊಳೆನರಸೀಪುರದ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಇರಿಸಿದ್ದಾರೆ. ವಿಚಾರಣೆ ಬಳಿಕ ಇಂದು ಸಂಜೆಯೊಳಗೆ ದೇವರಾಜೇಗೌಡರನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ:ಪ್ರೇಮಿಗಳ ಮದುವೆಗೆ ಅಡ್ಡಿಯಾದ ಜಾತಿ- ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು

