ಮುಂಬೈ: ಮಹಾರಾಷ್ಟ್ರ ರಾಜಕೀಯ (Maharashtra Politics) ವಲಯದಲ್ಲಿ ಭಾರೀ ಬೆಳವಣಿಗೆಯಾಗಿದೆ. ಲೋಕಸಭಾ ಚುನಾವಣೆ (Lok Sabha Elections) ಫಲಿತಾಂಶದ ಬೆನ್ನಲ್ಲೇ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ರಾಜೀನಾಮೆ ಘೋಷಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಶಿಂಧೆ ಬಣಕ್ಕೆ ಸೋಲಾಗಿದ್ದು, ಇದರ ನೈತಿಕ ಹೊಣೆ ಹೊತ್ತ ಫಡ್ನವಿಸ್ (Devendra Fadnavis) ರಾಜೀನಾಮೆ ಘೋಷಿಸಿದ್ದಾರೆ. ಸರ್ಕಾರದ ಜವಬ್ದಾರಿಯಿಂದ ಬಿಡುಗಡೆಗೊಳಿಸಲು ಹೈಕಮಾಂಡ್‌ಗೆ (BJP Highcommond) ಮನವಿ ಮಾಡಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಷ ಸೇವಿಸಿ ದಂಪತಿ ಆತ್ಮಹತ್ಯೆ
ಶಿಂಧೆ ಬಣಕ್ಕೆ ಸೋಲಾಗಿದ್ದು ಮಹಾ ವಿಕಾಸ ಅಘಾಡಿ ಮೈತ್ರಿ ಹೆಚ್ಚು ಸ್ಥಾನ ಗೆದ್ದುಕೊಂಡಿದೆ. ಒಟ್ಟು 48 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 13, ಬಿಜೆಪಿ 9, ಶಿವಸೇನೆ (ಉದ್ಧವ್ ಠಾಕ್ರೆ) 9, ಎನ್‌ಸಿಪಿ( ಶರಾದ್ ಪವಾರ್) 8, ಶಿಂಧೆ(ಶಿವಸೇನೆ) 7 ಸ್ಥಾನವನ್ನು ಗೆದ್ದುಕೊಂಡಿದೆ. ಇದನ್ನೂ ಓದಿ: ನಿತೀಶ್, ಯಾದವ್ ಒಂದೇ ವಿಮಾನದಲ್ಲಿ ಪ್ರಯಾಣ- ಜೆಡಿಯು ಸ್ಪಷ್ಟನೆ
2019 ರಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡಿತ್ತು. ಈ ಮೈತ್ರಿ 43 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಯುಪಿಎ ಮೈತ್ರಿ ಕೇವಲ 5 ಸ್ಥಾನ ಮಾತ್ರ ಗೆದ್ದುಕೊಂಡಿತ್ತು. ಮುಂದೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ.ಇದನ್ನೂ ಓದಿ: ಮೂರನೇ ಬಾರಿಗೆ ಮೋದಿ ಪ್ರಧಾನಿ – ಜೂನ್ 8 ಸಂಜೆ ಪ್ರಮಾಣವಚನ