ಬೆಂಗಳೂರು: ಅಶ್ಲೀಲ ಪೆನ್ ಡ್ರೈವ್ (Pen Drive) ಸುಳಿಯಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಇಂದು ಜರ್ಮನಿಯ (Germany) ಮ್ಯೂನಿಕ್‌ನಿಂದ ಹೊರಟು ರಾಜ್ಯಕ್ಕೆ ಬರುವ ಸಾಧ್ಯತೆ ಇದೆ.
ಇಂದು ಮಧ್ಯಾಹ್ನ 12:30ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ ಮ್ಯೂನಿಕ್‌ನಿಂದ ಹೊರಟು ರಾತ್ರಿ 12:30ಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಈ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಆಗಮಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ 3 ಮಕ್ಕಳು ಶವವಾಗಿ ಪತ್ತೆ- FIR ದಾಖಲು
ಬುಸಿನೆಸ್ ಕ್ಲಾಸ್ ಟಿಕೆಟ್‌ಅನ್ನು ಪ್ರಜ್ವಲ್ ರೇವಣ್ಣ ಅವರು ಬುಕ್ ಮಾಡಿದ್ದು, ಈವರೆಗೂ ಟಿಕೆಟ್ ಕ್ಯಾನ್ಸಲ್ ಮಾಡಿಲ್ಲ. ಕೊನೆ ಕ್ಷಣದಲ್ಲಿ ಟಿಕೆಟ್ ರದ್ದು ಮಾಡದೇ ಇದ್ದರೆ ಪ್ರಜ್ವಲ್ ರೇವಣ್ಣ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಇದನ್ನೂ ಓದಿ: ಪ್ರೀತಿಸಿದ ಹುಡುಗಿ ಕೈ ಕೊಟ್ಟಿದಕ್ಕೆ ಯುವಕ ಆತ್ಮಹತ್ಯೆ
ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಪೊಲೀಸರು ಹೆಚ್‌ಡಿ ರೇವಣ್ಣ ಅವರನ್ನು ಬಂಧಿಸಿತ್ತು. ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ರೇವಣ್ಣ ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದನ್ನೂ ಓದಿ: ಪೆನ್‌ಡ್ರೈವ್ ಪ್ರಕರಣ :ಲಿಖಿತ್ ಗೌಡ, ಚೇತನ್ ಜಾಮೀನು ಅರ್ಜಿ ವಜಾ

