By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. : ಕೇಂದ್ರ ಸಚಿವ ಹೆಚ್ಡಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. : ಕೇಂದ್ರ ಸಚಿವ ಹೆಚ್ಡಿಕೆ

BlogLatestರಾಜ್ಯ-Karnataka

ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. : ಕೇಂದ್ರ ಸಚಿವ ಹೆಚ್ಡಿಕೆ

Didn’t receive Lokayukta summons: HDK

Published September 27, 2024
Share
3 Min Read
hd kumaraswamy hd kumaraswamy hd kumaraswamy
SHARE

ಬೆಂಗಳೂರು: ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. ನನಗೆ ಯಾವ ನೋಟಿಸ್ ಕೂಡ ಬಂದಿಲ್ಲ ಎಂದು ಕೇಂದ್ರದ ಭಾರೀ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು. ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾದ ನಂತರ ಅಲ್ಲಿಯೇ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಬೆಳಗ್ಗೆಯಿಂದ ನೋಡುತ್ತಿದ್ದೇನೆ. ಕುಮಾರಸ್ವಾಮಿ ಅವರಿಗೆ ರಾಜಕೀಯ ಗಂಡಾಂತರ, ಭೂ ಗಂಡಾಂತರ ಎಂದು ಚರ್ಚೆ ನಡೆಯುತ್ತಿದೆ. ಆದರೆ, ನನ್ನ ರಾಜಕೀಯ ಜೀವನದಲ್ಲಿ ಗಂಡಾಂತರ ತಂದುಕೊಳ್ಳುವ ಯಾವುದೇ ಕೆಲಸವನ್ನೂ ಮಾಡಿಲ್ಲ ಎಂದು ಅವರು ನೇರ ಮಾತುಗಳಲ್ಲಿ ಹೇಳಿದರು.

ರಾಜಕೀಯ ಒತ್ತಡದಿಂದ ನನ್ನ ಮೇಲೆ ಈ ಪ್ರಕರಣವನ್ನು ಮುನ್ನೆಲೆಗೆ ತರಲಾಗಿದೆ. ಈ ಪ್ರಕರಣದಲ್ಲಿ ಕಾನೂನುಬಾಹಿರವಾಗಿ ನನ್ನಿಂದ ಆದೇಶ ಆಗಿಲ್ಲ. ಒಂದು ವೇಳೆ ನಾನು ಡಿನೋಟಿಫಿಕೇಶನ್ ಮಾಡಬೇಕು ಎಂದು ಅಂದುಕೊಂಡಿದ್ದಿದ್ದರೆ ನಾನೇ ಮಾಡುತ್ತಿದ್ದೆ. ಅಷ್ಟು ಸಾಮಾನ್ಯ ತಿಳುವಳಿಕೆ ನನ್ನ ಬಗ್ಗೆ ಟೀಕೆ ಮಾಡುತ್ತಿರುವವರಿಗೆ ಇಲ್ಲ ಎಂದು ಕೇಂದ್ರ ಸಚಿವರು ತರಾಟೆಗೆ ತೆಗೆದುಕೊಂಡರು.

ಈಗಾಗಲೇ ಈ ಪ್ರಕರಣದ ಬಗ್ಗೆ ಲೋಕಾಯುಕ್ತರು ಹೇಳಿಕೆ ದಾಖಲಿಸಿಕೊಂಡಿದ್ದರು. ಈಗ ಮತ್ತೆ ಹೇಳಿಕೆ ನೀಡಿದ್ದೇನೆ. ಈ ಪ್ರಕರಣದ ಬಗ್ಗೆ ನನಗೆ ಯಾವ ಆತಂಕವೂ ಇಲ್ಲ ಎಂದು ಅವರು ತಿಳಿಸಿದರು.

ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ:
ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ. 2015ರ ಸಿದ್ದರಾಮಯ್ಯ ಸರ್ಕಾರವಿದ್ದಾಗ ನನ್ನ ಮೇಲೆ ಹಾಕಿರುವ ಕೇಸ್ ಇದು. ಪಲಾಯನ ಮಾಡುವ ಅಗತ್ಯ ನನಗೆ ಇಲ್ಲ. ಅಂಥ ಜಾಯಮಾನ ನನ್ನದಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಯಾವ ಮುಖ ಇಟ್ಕೊಂಡು ನನ್ನ ಮುಖ್ಯಮಂತ್ರಿ ಮಾಡಿಕೊಂಡಿದ್ದರು?
ನನ್ನ ಬಗ್ಗೆ ಹೇಳಿಕೆ ಕೊಟ್ಟಿರುವ ಅಷ್ಟೂ ಮಂದಿ ಸಚಿವರು, ಶಾಸಕರು 2018ರಲ್ಲಿ ನನ್ನನ್ನು ಸಿಎಂ ಮಾಡಿದ್ದವರು. ಅಂತಹ ಆರೋಪ ನನ್ನ ಮೇಲೆ ಇದ್ದಾಗ ಕಾಂಗ್ರೆಸ್ ಪಕ್ಷ ನನ್ನ ಜತೆ ಸರ್ಕಾರ ಮಾಡಿದ್ದೇಕೆ? ಯಾವ ಮುಖ ಇಟ್ಕೊಂಡು ನನ್ನ ಮುಖ್ಯಮಂತ್ರಿ ಮಾಡಿಕೊಂಡಿದ್ದರು ಇವರು. ಆವತ್ತು ಕುಮಾರಸ್ವಾಮಿ ಕೆಟ್ಟವರಾಗಿರಲಿಲ್ಲವೇ? ಎಂದು ಅವರು ಕಿಡಿಕಾರಿದರು.

ಬೆಳಗ್ಗೆ ಮುಖ್ಯಮಂತ್ರಿಗಳ ಹೇಳಿಕೆಯನ್ನು ಗಮನಿಸಿದ್ದೇನೆ. ಅವರಿಗೂ ಉತ್ತರ ಕೊಡುತ್ತೇನೆ. ಇವತ್ತು ನನ್ನನ್ನು ಆರೋಪಿ ಸ್ಥಾನದಲ್ಲಿ ನೋಡುತ್ತಿರುವ ಸಚಿವ ಮಹಾಶಯರು ನನ್ನ ಸಂಪುಟದಲ್ಲಿಯೂ ಸಚಿವರಾಗಿದ್ದರು. ಆಗ ಇವರೆಲ್ಲರ ಪ್ರಾಮಾಣಿಕತೆ, ನೈತಿಕತೆ ಎಲ್ಲಿ ಹೋಗಿತ್ತು? ಎಂದು ಕೇಂದ್ರ ಸಚಿವರು ಖಾರವಾಗಿ ಪ್ರಶ್ನಿಸಿದರು.

ನನ್ನ ರಾಜೀನಾಮೆ ಕೇಳುವ ನೈತಿಕತೆ ಇವರಿಗೆ ಇಲ್ಲ:
ಈ ಸರ್ಕಾರದ ಸಚಿವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನನ್ನ ರಾಜೀನಾಮೆ ಕೇಳುವ, ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಈ ಪ್ರಕರಣದಲ್ಲಿ ನನ್ನ ಪಾತ್ರ ಏನೂ ಇಲ್ಲ ಎಂಬುದು ದಾಖಲೆಗಳೇ ಹೇಳುತ್ತವೆ. ಇವರ ಹಾಗೆ ನಾನು ಸರ್ಕಾರದ ಭೂಮಿ ಲೂಟಿ ಮಾಡಿಲ್ಲ. ಮೂಡಾ ಹಗರಣವನ್ನೇ ನೋಡಿದ್ದೀರಿ. ಕುಮಾರಸ್ವಾಮಿ ಯಾಕೆ ರಾಜಿನಾಮೆ ಕೊಡಬೇಕು? ಲೂಟಿ ಮಾಡಿರೋದು ಇವರು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳುಹಿಸಬೇಕು ಎಂದು ಹಿಂದಿನ ಐದು ವರ್ಷದ ಕಾಂಗ್ರೆಸ್ ಸರ್ಕಾರದಲ್ಲಿ ಸಂಚು ರೂಪಿಸಿದ್ದರು. ಅವರ ಆಸೆ ಈಡೇರಲಿಲ್ಲ. ಯಾಕೆಂದರೆ ಆ ಸಂದರ್ಭದಲ್ಲಿಯೂ ದಿನವೂ ಕಾಂಗ್ರೆಸ್ ನಾಯಕರ ಭ್ರಷ್ಟ ಮುಖವನ್ನು ಬಯಲು ಮಾಡುತ್ತಿದ್ದೆ. ಇವನ ಕಾಟ ತಡೆಯಲು ಆಗುತ್ತಿಲ್ಲ, ಒಂದು ದಿನವಾದರೂ ಇವನನ್ನು ಜೈಲಿಗೆ ಕಳಿಸಬೇಕು ಎಂದು ಹೊಂಚು ಹಾಕಿದ್ದರು. ಆಗಲೂ ಇವರಿಗೆ ನನ್ನನ್ನು ಏನೂ ಮಾಡಲು ಆಗಲಿಲ್ಲ. ಈಗಲೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಬೆಂಕಿ ಹಚ್ಚಿ ಹೆಂಡತಿ ಕೊಂದಿದ್ದ ಆರೋಪಿ 27 ವರ್ಷಗಳ ಬಳಿಕ ಸೆರೆ

ನಾನೇನು ತಪ್ಪು ಮಾಡಿ ಇಲ್ಲಿಗೆ ಬಂದಿಲ್ಲ. ಸ್ವಯಂ ಪ್ರೇರಿತವಾಗಿ ಬಂದಿದ್ದೇನೆ. ನಾಳೆ (ಶನಿವಾರ) ಬೆಳಗ್ಗೆ 11 ಗಂಟೆಗೆ ದಾಖಲಾತಿಗಳನ್ನು ಬಿಡುಗಡೆ ಮಾಡುತ್ತೇನೆ. ಈ ಸರ್ಕಾರದಲ್ಲಿರುವ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ದರೋಡೆಕೋರರು. ಆ ದಾಖಲೆಗಳನ್ನು ನೋಡಿದ ಮೇಲೆ ಈ ಸಚಿವರುಗಳು ನನ್ನ ಬಗ್ಗೆ ಮಾತನಾಡಲಿ.

ಇವರ ಆಡಳಿತದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ಹೇಗೆ ಕೆಲಸ ಮಾಡುತ್ತಿದೆ? ಒಂದು ಪೊಲೀಸ್ ಠಾಣೆಯಂತೆ ಕೆಲಸ ಮಾಡುತ್ತಿದೆ. ಕಳೆದ ಹಲವು ದಿನಗಳಿಂದ ಡಿಜಿ ಕಚೇರಿಗೆ ಹೆಣ್ಣುಮಕ್ಕಳನ್ನು ಕರೆಸಿಕೊಂಡು ಎಫ್ ಐಆರ್ ಹಾಕುತ್ತಿದ್ದಾರೆ ಎಂದು ಸಚಿವರು ದೂರಿದರು.

You Might Also Like

ಕಾರಿಗೆ ಟಿಪ್ಪರ್ ಡಿಕ್ಕಿಯಾಗಿ ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ,7 ಮಂದಿ ದುರ್ಮರಣ.!

ಬೆಂಗಳೂರಿನ ಕಂಟೋನ್ಮೆಂಟ್ ನಿಲ್ದಾಣದಲ್ಲಿ 92 ದಿನ ರೈಲು ನಿಲುಗಡೆಗೆ ನಿರ್ಬಂಧ

ಬಿಡಿಎ ಕಾರ್ಯಾಚರಣೆ : ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 19 ಆಸ್ತಿ ವಶ

ಪ್ರಧಾನಿ ಮೋದಿ 3 ದಿನಗಳ ವಿದೇಶ ಪ್ರವಾಸ : ಬ್ರೂನಿ ಮತ್ತು ಸಿಂಗಾಪುರಕ್ಕೆ ಭೇಟಿ

ಕೇರಳದಲ್ಲಿ HMT ಘಟಕಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

TAGGED:#lokayuktaKumaraswamy
Share This Article
Facebook Copy Link Print
Previous Article Accused who set fire and killed his wife arrested after 27 years ಬೆಂಕಿ ಹಚ್ಚಿ ಹೆಂಡತಿ ಕೊಂದಿದ್ದ ಆರೋಪಿ 27 ವರ್ಷಗಳ ಬಳಿಕ ಸೆರೆ
Next Article Siddaramaiah ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ : ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up