ಅಯೋಗ್ಯ ಸಿನಿಮಾ ಮೂಲಕ ಮೋಡಿ ಮಾಡಿದ್ದ ರಚಿತಾ ರಾಮ್ ಹಾಗೂ ಸತೀಶ್ ನಿನಾಸಂ ಮತ್ತೆ ಒಂದಾಗಿದ್ದಾರೆ. ಅಯೋಗ್ಯ ಸಿನಿಮಾದ ಪಾರ್ಟ್ 2 ಮೂಲಕ ಈ ಜೋಡಿ ಇದೀಗ 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದೆ. ಈಗಾಗಲೇ ಈ ಚಿತ್ರದ ಮುಹೂರ್ತಕ್ಕೆ ಡೇಟ್ ಕೂಡ ಫಿಕ್ಸ್ ಆಗಿದ್ದು ‘ಅಯೋಗ್ಯ’ ಚಿತ್ರತಂಡ ಅಧಿಕೃತವಾಗಿ ಚಿತ್ರವನ್ನು ಘೋಷಿಸಿದೆ.
ಅಯೋಗ್ಯ ಸಿನಿಮಾದ ಹಾಡುಗಳು ಕನ್ನಡ ಸಿನಿಮಾರಂಗದಲ್ಲಿಯೇ ಹೊಸ ಇತಿಹಾಸ ಬರೆದಿತ್ತು. ಈಗ ಮತ್ತಷ್ಟು ನಿರೀಕ್ಷೆಗಳೊಂದಿಗೆ ಚಿತ್ರತಂಡ ಹೊಸ ದಾಖಲೆ ಸೃಷ್ಟಿಸಲು ಸಜ್ಜಾಗಿದೆ. ಇನ್ನು ಅಯೋಗ್ಯ2 ಸಿನಿಮಾ ಡಿಸೆಂಬರ್ 11 ರಂದು ಸೆಟ್ಟೇರಲಿದ್ದು ಮಹೇಶ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಎಂ ಮುನೇಗೌಡ ಅಯೋಗ್ಯ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಇರಲಿದೆ.
ರಚಿತಾ ರಾಮ್, ಸತೀಶ್ ನಿನಾಸಂ, ರವಿಶಂಕರ್, ಶಿವರಾಜ್ ಕೆ ಆರ್ ಪೇಟೆ ಸೇರಿದಂತೆ ಅಯೋಗ್ಯ ಸಿನಿಮಾದಲ್ಲಿ ಅಭಿನಯಿಸಿದ ಬಹುತೇಕ ಕಲಾವಿದರು ಅಯೋಗ್ಯ2 ನಲ್ಲಿ ಮುಂದುವರೆಯುತ್ತಿರುವುದು ವಿಶೇಷ.