ಬೆಂಗಳೂರು: ಅನ್ನಭಾಗ್ಯ ಫಲಾನುಭವಿಗಳಿಗೆ ಇನ್ಮುಂದೆ ಹಣದ ಬದಲಾಗಿ ಸಿಗಲಿದೆ ಅಕ್ಕಿ ನೀಡಲಾಗುತ್ತದೆ. ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ನೀಡಲು ಸರ್ಕಾರ ಮುಂದಾಗಿದೆ.
ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು ಕೇಂದ್ರ ಸರ್ಕಾರ ಕಳೆದ ವರ್ಷ ತಿರಸ್ಕರಿಸಿತ್ತು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಆದರೆ, ಇದೀಗ ಕೇಂದ್ರ ಸರ್ಕಾರ ನಿರ್ಧಾರ ಬದಲಾಯಿಸಿದೆ.ಈ ಹಿನ್ನೆಲೆಯಲ್ಲಿ ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ನೀಡಲು ಸರ್ಕಾರ ಮುಂದಾಗಿದೆ.
ಬಿಪಿಎಲ್ ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡುವುದಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಅಕ್ಕಿ ಪೂರೈಸುವ ಬಗ್ಗೆ ಭಾರತೀಯ ಆಹಾರ ನಿಗಮ) ಈಗಾಗಲೇ ಘೋಷಣೆ ಮಾಡಿದೆ. ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಗಾಗಿ 2.38 ಲಕ್ಷ ಟನ್ ಅಕ್ಕಿಯನ್ನು ಪೂರೈಸಲು ಮನವಿ ಮಾಡಿದೆ. ಅದನ್ನು ಪೂರೈಸಲು ನಾವು ಸಿದ್ಧರಿದ್ದೇವೆ ಎಂದು ಎಫ್‌ಸಿಐ ಒಪ್ಪಿಗೆ ನೀಡಿದೆ.

