By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: National Herald Case : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್​ ಹೆಸರು..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - National Herald Case : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್​ ಹೆಸರು..!

ರಾಜ್ಯ-KarnatakaLatest

National Herald Case : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್​ ಹೆಸರು..!

DK Brothers' name in National Herald case..!

Published May 23, 2025
Share
2 Min Read
DK Shivakuamr DK Brothers
SHARE

National Herald Case : ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಈಗ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್​ ಅವರ ಬಾಗಿಲಿಗೆ ಬಂದು ನಿಂತಿದೆ. ಯಂಗ್‌ ಇಂಡಿಯಾಗೆ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ 2.5 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ನಲ್ಲಿ ಇಬ್ಬರ ಹೆಸರು ಉಲ್ಲೇಖಿಸಿದೆ ಎಂದು ತಿಳಿದುಬಂದಿದೆ.

ಹೀಗಾಗಿ ಡಿಕೆ ಬ್ರದರ್ಸ್​ಗೆ ಇಡಿ ಸಂಕಷ್ಟ ಎದುರಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಹೋದರರು, ನಾನು 25 ಲಕ್ಷ, ನನ್ನ ತಮ್ಮ ಡಿ.ಕೆ.ಸುರೇಶ್ 25 ಲಕ್ಷ ಕೊಟ್ಟಿದ್ದಾನೆ. ನಮ್ಮ ಪಕ್ಷ ನಡೆಸುತ್ತಿದ್ದ ಪತ್ರಿಕೆಗೆ ದೇಣಿಗೆ ಕೊಟ್ಟರೆ ತಪ್ಪೇನು? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ತನಿಖೆ ನಡೆಸಿದ್ದ ಇಡಿ ಅಧಿಕಾರಿಗಳು , ದೇಣಿಗೆ ನೀಡಿದ್ದ ಮೂಲವನ್ನು ಕೆದಕಿದ್ದು, ಈ ಸಂಬಂಧ 2022ರ ನವೆಂಬರ್ ನಲ್ಲಿ ಡಿಕೆ ಸರೇಶ್ ಅವರನ್ನು ವಿಚಾರಣೆಗೊಳಪಡಿಸಿತ್ತು. ಎರಡು ದಿನಗಳ ವಿಚಾರಣೆ ವೇಳೆ ಡಿಕೆ ಸುರೇಶ್ ಸಹ ದೇಣಿಗೆ ನೀಡಿದ ಹಣದ ಮೂಲದ ದಾಖಲೆಗಳನ್ನು ಇಡಿ ಮುಂದಿಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಈ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ಚಾರ್ಜ್​ಶೀಟ್​ನಲ್ಲಿ ಇಡಿ ಅಧಿಕಾರಿಗಳು, ಡಿಸಿಎಂ ಡಿಕೆ ಶಿವಕುಮಾರ್, ಡಿಕೆ ಸುರೇಶ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೆಸರು ಉಲ್ಲೇಖ ಮಾಡಿದ್ದಾರೆ.

ರಾಜಾರೋಷವಾಗಿ 25 ಲಕ್ಷ ರೂ. ಕೊಟ್ಟಿದ್ದೇನೆ; ಡಿ.ಕೆ ಶಿವಕುಮಾರ್
ನ್ಯಾಷನಲ್ ಹೆರಾಲ್ಡ್ ನಮ್ಮ ಪಕ್ಷ ನಡೆಸುವಂತಹ ಪತ್ರಿಕೆ‌ ಅದಕ್ಕೆ ನಾನು ಹಾಗೂ ಸುರೇಶ್ 25 ಲಕ್ಷ ದುಡ್ಡು ಕೊಟ್ಟಿದ್ದೇವೆ, ‌ನಮ್ಮ ಟ್ರಸ್ಟ್‌ ನಿಂದಲೂ ದೇಣಿಗೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಹೇಳಿದ್ದಾರೆ.

ದೇಣಿಗೆ ನೀಡಿರುವುದರಿಂದ ನಿಮಗೆ ತೊಂದರೆಯಾಗುತ್ತದೆಯೇ ಎಂದಾಗ ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಇಂದು (23) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ದುಡಿದಂತಹ ಆಸ್ತಿಯಿಂದ ರಾಜರೋಷವಾಗಿ ಹಣ ನೀಡಿದ್ದೇವೆ, ನಾವು ಕದ್ದುಮುಚ್ಚಿ ಹಣ ನೀಡಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಈ ಬಗ್ಗೆ ಮಾಜಿ ಸಂಸದ ಡಿಕೆ ಸುರೇಶ್​ ಪ್ರತಿಕ್ರಿಯಿಸಿ, ಯಂಗ್ ಇಂಡಿಯಾ ಟ್ರಸ್ಟ್ ಗೆ ಹಣ ಕೊಟ್ಟಿದ್ದೇವೆ. ಎರಡು, ಎರಡೂವರೆ ಕೋಟಿ ರೂ. ಹಣ ಕೊಟ್ಟಿದ್ದೇವೆ. ಈ ಸಂಬಂಧ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿದ್ದೇವೆ. ನಾವು ಕೊಟ್ಟಿಲ್ಲ ಅಂತ ಹೇಳುತ್ತಿಲ್ಲ. ದುರುದ್ದೇಶ ಪೂರ್ವಕವಾಗಿ ಆರೋಪ ಮಾಡುತ್ತಿದ್ದು, ನಮ್ಮ‌ ಕಾಂಗ್ರೆಸ್ ನಾಯಕರ‌ ಮೇಲೆ‌ ಹೊರಿಸುವ ಪ್ರಯತ್ನ ಚಾರ್ಜ್‌ಶೀಟ್ ನಲ್ಲಿ ಮಾಡಿದ್ದಾರೆ. ನಾವು ಕಾನೂನಾತ್ಮಕವಾಗಿ‌ ಹೋರಾಟ ಮಾಡುತ್ತೇವೆ. ಇದು ರಾಜಕೀಯ ಪೂರಿತವಾದ ಪ್ರಕರಣ. ಸೋನಿಯಾ ಗಾಂಧಿಯವರ ಟ್ರಸ್ಟ್ ಅಲ್ಲ. ಯಂಗ್ ಇಂಡಿಯಾ ಸಂಸ್ಥೆಗೆ ಕೊಟ್ಟಿರೋದು. ಅವರು ವೈಯುಕ್ತಿಕವಾಗಿ ಹಣ ಬಳಸಿಕೊಂಡಿಲ್ಲ. ಅದು‌ ಟ್ರಸ್ಟ್ ಗೆ ಬಳಕೆಯಾಗಿದೆ. ಇಡಿಯವರಿಗೂ ಎಲ್ಲ ಮಾಹಿತಿ ಕೊಟ್ಟಿದ್ದೇವೆ. ಇದರಲ್ಲಿ ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ಹೇಳಿದರು.

You Might Also Like

ಅಕ್ರಮ ಮದ್ಯ ಮಾರಾಟವನ್ನು ವರದಿ ಮಾಡಿದ ಪತ್ರಕರ್ತರಿಗೆ ಪೊಲೀಸರಿಂದ ಜೀವ ಬೆದರಿಕೆ

ವಿಜಯೋತ್ಸವಕ್ಕೆ ಬಿಜೆಪಿ ಭರ್ಜರಿ ಸಿದ್ಧತೆ- ಪಾಟ್ನಾದಲ್ಲಿ 400 ಕೆಜಿ ಲಡ್ಡು ಸಿದ್ಧ

2024ರ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿ ಗೆದ್ದ ಜಾನ್ ಜೆ. ಹಾಪ್‌ಫೀಲ್ಡ್ ಮತ್ತು ಜೆಫ್ರಿ ಇ. ಹಿಂಟನ್​​

ಕೆಆರ್​ಎಸ್​ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಭ್ರಷ್ಟರ ಆಸ್ತಿ ಬಯಲು

TAGGED:DK BrothersNational Herald Case
Share This Article
Facebook Copy Link Print
Previous Article Shaurya Chakra Shaurya Chakra : ಅಪ್ರತಿಮ ಶೌರ್ಯ ಪ್ರದರ್ಶಿಸಿದ ಯೋಧರಿಗೆ ಪುರಸ್ಕಾರ : 33 ಶೌರ್ಯ ಚಕ್ರ ಪ್ರಶಸ್ತಿ, 6 ಕೀರ್ತಿ ಚಕ್ರ ಪ್ರಶಸ್ತಿ ಪ್ರದಾನ
Next Article Aishwarya Ri Aishwarya Ri Aishwarya Ri Aishwarya Rai : ಕಾನ್‌‌ ಫೆಸ್ಟಿವಲ್‌ನಲ್ಲಿ ಸಿಂಧೂರ ಧರಿಸಿ ಸಿಂಗಾರಗೊಂಡು ಗಮನ ಸೆಳೆದ ಐಶ್ವರ್ಯ ರೈ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up