ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಹೆಸರು ಹೇಳಿಕೊಂಡು ಐಶ್ವರ್ಯಾ ಗೌಡ ವಂಚನೆ ಮಾಡಿರುವ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಪ್ರಕರಣ ಸಂಬಂಧ ಡಿಕೆ ಸುರೇಶ್‌ಗೂ ಇಡಿ ನೋಟಿಸ್ ಜಾರಿ ಮಾಡಿತ್ತು.
ಕಳೆದ ಮಂಗಳವಾರ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಅದರಂತೆ ಕೆಲ ಸಮಯ ಕಾಲಾವಕಾಶ ಕೇಳಿದ್ದ ಸುರೇಶ್, ಸೋಮವಾರ ವಿಚಾರಣೆಗೆ ಹಾಜರಾದರು.
ಸೋಮವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಬರುವಂತೆ ಇಡಿ ಸೂಚಿಸಿತ್ತು. ಆದರೆ, ಡಿಕೆ ಸುರೇಶ್ 11.15ಕ್ಕೆ ವಿಚಾರಣೆಗೆ ಹಾಜರಾದರು. ತಡವಾಗಿದ್ದಕ್ಕೆ ಕಚೇರಿ ಹೊರಗಡೆಯೇ ಡಿಕೆ ಸುರೇಶ್‌ರನ್ನು ಕೂರಿಸಲಾಗಿತ್ತು.
ರಿಜಿಸ್ಟರ್‌ನಲ್ಲಿ ಸಹಿ ಮಾಡುವಂತೆ ಸೂಚಿಸಲಾಗಿತ್ತು. ಸಹಿ ಮಾಡಿದ ಬಳಿಕವೂ ಕಚೇರಿ ಸುರೇಶ್‌ರನ್ನು ಒಳಗೆ ಬಿಡಲು ಇಡಿ ಅಧಿಕಾರಿಗಳು ವಿಳಂಬ ಮಾಡಿದರು. ಈ ವೇಳೆ ಸುರೇಶ್, ಏರು ಧ್ವನಿಯಲ್ಲೇ ಪ್ರಶ್ನಿಸಿದ್ದಾರೆ. ಇಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ವಿಚಾರಣೆಗೆ ಆಗಮಿಸುವ ಮುನ್ನ ಮಾತನಾಡಿದ ಡಿಕೆ ಸುರೇಶ್, ವಂಚನೆ ಕೇಸ್‌ಗೂ ನನಗೂ ಸಂಬಂಧವಿಲ್ಲ ಎಂದಿದ್ದಾರೆ. ತನಿಖೆಗೆ ಸಹಕಾರ ಕೊಡುತ್ತೇನೆ ಎಂದಿದ್ದಾರೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

