ಬೆಂಗಳೂರು: ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ. ಭಾರತೀಯ ಯೋಗ (Yoga) ಪರಂಪರೆಯಿಂದು ವಿಶ್ವವ್ಯಾಪಿಯಾಗಿದೆ. ಭಾರತ ಮತ್ತು ಇತರ ದೇಶಗಳ ಸಂಬಂಧವನ್ನು ಆರೋಗ್ಯಪೂರ್ಣವಾಗಿಸುವ ಮಹತ್ವದ ಕಾರ್ಯವಾಗಿ ರೂಪುಗೊಂಡಿದೆ. ಇಂದು ಯೋಗ ದಿನವನ್ನ (Yoga day) ಆಚರಿಸುವ ಬೆನ್ನಲ್ಲೇ ವಿಧಾನಸೌಧದ (Vidana Soudha) ಎದುರು ಡಿಸಿಎಂ ಡಿಕೆ. ಶಿವಕುಮಾರ್ (DK̤̤ Shivakumar) ಅವರು ವಿವಿಧ ಆಸನಗಳನ್ನು ಮಾಡುವ ಮೂಲಕ ಯೋಗ ದಿನವನ್ನು ಆಚರಿಸಿದ್ದಾರೆ.
ಯೋಗವು ಯಾವುದೇ ಜಾತಿ, ಧರ್ಮ, ಮತ ಪಂಥಕ್ಕೆ ಸೀಮಿತವಾಗದೇ ಎಲ್ಲವನ್ನೂ ಎಲ್ಲರನ್ನೂ ಮೀರಿಸುವ ವಿಶ್ವಕುಟುಂಬಿಯಾಗಿ ಹಾಗೂ ವಿಶ್ವ ಆರೋಗ್ಯಕ್ಕಾಗಿ (World Health) ಎನ್ನುವ ನಿಟ್ಟಿನಲ್ಲಿ ಸಾಕಾರಾರಗೊಂಡಿದೆ. ಇದೇ ನಿಟ್ಟಿನಲ್ಲಿ ಬೆಂಗಳೂರಿನಲ್ಲಿಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದ ಎದುರು ಆಯೋಜಿಸಿದ್ದ ʻಯೋಗೋತ್ಸವʼ ಕಾರ್ಯಕ್ರಮದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ರಾಜ್ಯಾಪಾಲ ಥಾವರ್ ಚಂದ್ ಗೆಹ್ಲೋಟ್ ಸಚಿವರಾದ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ ಹೊರಟ್ಟಿ, ನಟಿ ಅನು ಪ್ರಭಾಕರ್, ನಟ ಶರಣ್, ಅಶ್ವಿನಿ ನಾಚಪ್ಪ, ಟೀಂ ಇಂಡಿಯಾ ಕ್ರಿಕೆಟಿಗ ಮನೀಷ್ ಪಾಂಡೆ ಸಹ ಪಾಲ್ಗೊಂಡಿದ್ದರು.
ಇದರೊಂದಿಗೆ ನೂರಾರು ಸಾರ್ವಜನಿಕರು, ವಿವಿಧ ಶಾಲಾ ಕಾಲೇಜು ಮಕ್ಕಳು ಯೋಗ ಪ್ರದರ್ಶಿಸಿ ಆರೋಗ್ಯ ಸುರಕ್ಷತೆಗಳ ಬಗ್ಗೆ ಜಾಗೃತಿ ಮೂಡಿಸಿದರು.
ಈ ಬಾರಿಯ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ (Yoga for Self and Society) ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.