ಬೆಂಗಳೂರು: ಕೋಲ್ಕತಾದಲ್ಲಿ ಇತ್ತೀಚೆಗೆ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆಯನ್ನು ತೀವ್ರವಾಗಿ ಖಂಡಿಸಿರುವ ಭಾರತೀಯ ಮೆಡಿಕಲ್ ಕೌನ್ಸಿಲ್ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ. ಅದರ ಪರಿಣಾಮ, ಕರ್ನಾಟಕಕ್ಕೂ ತಟ್ಟಲಿದ್ದು ದೇಶಾದ್ಯಂತ ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಯಾವುದೇ ಸೇವೆಗಳು ಲಭ್ಯವಿವಿಲ್ಲ.
ಸರ್ಕಾರಿ ಮತ್ತು ಖಾಸಗಿ ಆಸ್ಫತ್ರೆಗಳ ಓಪಿಡಿ ಬಂದ್ ಇರಲಿದ್ದು, ಎಮರ್ಜೆನ್ಸಿ ಪೇಷೆಂಟ್‌ಗೆ ಮಾತ್ರ ಟ್ರೀಟ್‌ಮೆಂಟ್ ಸಿಗಲಿದೆ. ಎಲ್ಲಾ ವೈದ್ಯರು ಓಪಿಡಿ ಸೇವೆಗಳಿಗೆ ಹಾಜರಾಗದೆ, ಐಎಂಎ, ಫ್ರೀಡಂ ಪಾರ್ಕ್‌ಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಇನ್ನೂ ಸರ್ಕಾರಿ ವೈದ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಎಮರ್ಜೆನ್ಸಿ ಸೇವೆಯನ್ನ ಮಾತ್ರ ನೀಡಲಾಗುತ್ತಿದೆ. ರಾಜ್ಯದ ಸುಮಾರು 1 ಲಕ್ಷ ಸರ್ಕಾರಿ ವೈದ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ನಿಂದ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಹುಬ್ಬಳ್ಳಿ ವಿವಿಧ ಆಸ್ಪತ್ರೆಗಳು ಬಂದ್‌ಗೆ ಬೆಂಬಲ ನೀಡಿವೆ. 24 ತಾಸುಗಳ ವೈದ್ಯಕೀಯ ಸೇವೆ ಬಂದ್‌ಗೆ ಕರೆ ಕೊಡಲಾಗಿದೆ.
ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಯಾವುದೇ ಸರ್ಕಾರಿ ವೈದ್ಯರಿಗೆ ಸೆ. 17ರಂದು ರಜೆ ಇಲ್ಲ ಎಂದು ಅಧಿಕೃತವಾಗಿ ಆದೇಶ ಹೊರಡಿಸಿದೆ. ಅಲ್ಲದೆ, ತುರ್ತು ಸೇವಾ ಘಟಕಗಳಲ್ಲಿ ಹಾಗೂ ಓಡಿಪಿಗಳಲ್ಲಿ ಯಾವುದೇ ಸೇವೆ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕೆಂದು ವೈದ್ಯರಿಗೆ ತಾಕೀತು ಮಾಡಿದೆ. ಅಲ್ಲದೆ, ಹೊರವಿಭಾಗದ ರೋಗಿಗಳಿಗೆ, ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ರೋಗಿಗಳಿಗೆ, ಯಾವುದೇ ರೀತಿಯ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕೆಂದು ಆಸ್ಪತ್ರೆಗಳ ಅಧಿಕಾರಿಗಳಿಗೆ ಸೂಚಿಸಿತ್ತು.

