By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಡುಗೆ ಅನಿಲ ಉತ್ಪಾದನೆ ಶೇ.25ರಷ್ಟು ಏರಿಕೆ : ಕೇಂದ್ರ ಸರ್ಕಾರದಿಂದ ಮಾಹಿತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಅಡುಗೆ ಅನಿಲ ಉತ್ಪಾದನೆ ಶೇ.25ರಷ್ಟು ಏರಿಕೆ : ಕೇಂದ್ರ ಸರ್ಕಾರದಿಂದ ಮಾಹಿತಿ

ರಾಷ್ಟ್ರೀಯ-NationalLatest

ಅಡುಗೆ ಅನಿಲ ಉತ್ಪಾದನೆ ಶೇ.25ರಷ್ಟು ಏರಿಕೆ : ಕೇಂದ್ರ ಸರ್ಕಾರದಿಂದ ಮಾಹಿತಿ

Domestic LPG production increases by 25 pc; focus on household consumers

Published March 12, 2026
Share
2 Min Read
LPG Production
SHARE

ನವದೆಹಲಿ, ಮಾ.12: ದೇಶದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆಯಿಂದ ಹಲವೆಡೆ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸಂಕಷ್ಟ ಎದುರಿಸುತ್ತಿರುವ ನಡುವೆಯೇ ಕೇಂದ್ರ ಸರ್ಕಾರ ಜನರಿಗೆ ಸ್ವಲ್ಪ ನೆಮ್ಮದಿ ನೀಡುವ ಮಾಹಿತಿ ನೀಡಿದೆ. ದೇಶೀಯ ಅಡುಗೆ ಅನಿಲ ಉತ್ಪಾದನೆಯನ್ನು ಶೇಕಡಾ 25ರಷ್ಟು ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ (ಮಾರ್ಕೆಟಿಂಗ್ ಮತ್ತು ರಿಫೈನರಿ) ಸುಜಾತಾ ಶರ್ಮಾ ಮಾತನಾಡಿ, “ಭಾರತವು ತನ್ನ ಎಲ್‌ಪಿಜಿ ಅಗತ್ಯದ ಸುಮಾರು ಶೇ.60ರಷ್ಟು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ಇದರಲ್ಲಿ ಶೇ.90ರಷ್ಟು ಪೂರೈಕೆ ಹೊರ್ಮುಜ್ ಜಲಸಂಧಿ ಮಾರ್ಗದ ಮೂಲಕ ಬರುತ್ತಿತ್ತು. ಮಧ್ಯಪ್ರಾಚ್ಯದಲ್ಲಿ ಉಂಟಾದ ಯುದ್ಧ ಪರಿಸ್ಥಿತಿಯಿಂದ ಆ ಮಾರ್ಗ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದು, ಈ ಹಿನ್ನೆಲೆ ದೇಶೀಯ ಉತ್ಪಾದನೆ ಹೆಚ್ಚಿಸಲು ಸರ್ಕಾರ ನಿರ್ದೇಶನ ನೀಡಿತ್ತು. ಅದರಂತೆ ಸಂಸ್ಕರಣಾಗಾರಗಳು ಉತ್ಪಾದನೆಯನ್ನು ಶೇ.25ರಷ್ಟು ಹೆಚ್ಚಿಸಿವೆ” ಎಂದು ಹೇಳಿದರು.

ಜನರಲ್ಲಿ ಉಂಟಾಗಿರುವ ಭೀತಿಯಿಂದ ಅನಗತ್ಯವಾಗಿ ಸಿಲಿಂಡರ್ ಬುಕ್ಕಿಂಗ್ ಮಾಡುವ ಪ್ರವೃತ್ತಿ ಹೆಚ್ಚಾಗಿದ್ದು, ಇದರಿಂದ ಕೊರತೆ ಇನ್ನಷ್ಟು ತೀವ್ರವಾಗಿ ಕಾಣುತ್ತಿದೆ. ಆದ್ದರಿಂದ ಜನರು ಆತಂಕದಿಂದ ಬುಕ್ಕಿಂಗ್ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಎಲ್‌ಪಿಜಿ ವಿತರಣೆಯಲ್ಲಿ ಅನಿಯಂತ್ರಿತ ತಿರುಗಾಟವಾಗದಂತೆ ತಡೆಯಲು ‘ಒನ್ ಟೈಮ್ ಡೆಲಿವರಿ ಕೋಡ್’ (OTDC) ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದೇವೆ. ಜೊತೆಗೆ ಸಿಲಿಂಡರ್ ಮರುಬುಕ್ಕಿಂಗ್ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ವಿಸ್ತರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಪರಿಸ್ಥಿತಿಯನ್ನು ನಿಗಾ ವಹಿಸಲು ಹಾಗೂ ಅಗತ್ಯವಿದ್ದರೆ ಸರಿಯಾದ ವಿತರಣಾ ಯೋಜನೆ ರೂಪಿಸಲು ವಿಶೇಷ ಸಮಿತಿಯನ್ನೂ ನೇಮಕ ಮಾಡಲಾಗಿದೆ.

ಇದೇ ವೇಳೆ ಕಚ್ಚಾ ತೈಲ ಪೂರೈಕೆಯ ಬಗ್ಗೆ ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ದೇಶಕ್ಕೆ ದಿನಕ್ಕೆ ಬೇಕಾಗುವ 5.5 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲಕ್ಕಿಂತ ಹೆಚ್ಚು ಪೂರೈಕೆ ಲಭ್ಯವಾಗುತ್ತಿದೆ. ಪ್ರಸ್ತುತ 40ಕ್ಕೂ ಹೆಚ್ಚು ದೇಶಗಳಿಂದ ತೈಲ ಆಮದು ಮಾಡಿಕೊಳ್ಳಲಾಗುತ್ತಿದ್ದು, ಸಂಸ್ಕರಣಾಗಾರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಲಾಗಿದೆ.

ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಅಮೆರಿಕ–ಇಸ್ರೇಲ್ ನಡುವಿನ ಸಂಘರ್ಷದಿಂದ ಜಗತ್ತಿನ ಪ್ರಮುಖ ತೈಲ ಸಾಗಣೆ ಮಾರ್ಗವಾದ ಹೊರ್ಮುಜ್ ಜಲಸಂಧಿ ತಾತ್ಕಾಲಿಕವಾಗಿ ಬಂದ್ ಆಗಿರುವ ಪರಿಣಾಮ ಭಾರತ ಸೇರಿದಂತೆ ಹಲವು ದೇಶಗಳಿಗೆ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರ ಪರಿಣಾಮವಾಗಿ ಕೆಲವು ಮೆಟ್ರೋ ನಗರಗಳ ಹೋಟೆಲ್‌ಗಳು ಗ್ಯಾಸ್ ಕೊರತೆಯಿಂದ ಕಟ್ಟಿಗೆ ಮತ್ತು ಕಲ್ಲಿದ್ದಲು ಒಲೆಗಳನ್ನು ಬಳಸುವ ಪರಿಸ್ಥಿತಿ ಎದುರಿಸುತ್ತಿವೆ.

ಭಾರತವು ತನ್ನ ಒಟ್ಟು ಎಲ್‌ಪಿಜಿ ಅಗತ್ಯದ ಸುಮಾರು ಶೇ.62ರಷ್ಟು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿದ್ದು, ಇದರಲ್ಲಿ ಹೆಚ್ಚಿನ ಪಾಲನ್ನು ಕತಾರ್, ಯುಎಇ, ಸೌದಿ ಅರೇಬಿಯಾ ಮತ್ತು ಕುವೈತ್‌ನಂತಹ ಮಧ್ಯಪ್ರಾಚ್ಯ ರಾಷ್ಟ್ರಗಳು ಪೂರೈಸುತ್ತಿವೆ.

You Might Also Like

ಮೋದಿ ನಿವೃತ್ತಿ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ಪಷ್ಟನೆ

ಆಸ್ಪತ್ರೆಗೆ ಭೇಟಿ ನೀಡಿ ದೆಹಲಿ ಸ್ಪೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಬೆಂಗಳೂರಲ್ಲಿ ಕಳ್ಳರ ಕಾಟ : ಅಮೇಜಾನ್, ಪ್ಲಿಫ್‌ಕಾರ್ಟ್ ಡೆಲಿವರಿ ಬಾಯ್‌ಗಳೇ ಟಾರ್ಗೆಟ್

ಛತ್ತೀಸ್‌ಗಢದಲ್ಲಿ ಇಬ್ಬರು ನಕ್ಸಲರ ಹತ್ಯೆ

ಕೆನಡಾದ ಬಿಲಿಯನೇರ್: ಫ್ರಾಂಕ್ ಸ್ಟ್ರೋನಾಚ್ ವಿರುದ್ಧ ರೇಪ್, ಲೈಂಗಿಕ ದೌರ್ಜನ್ಯದ ಆರೋಪ

TAGGED:LPG Production
Share This Article
Facebook Copy Link Print
Previous Article Harimurali ಮಲಯಾಳಂ ಯುವ ನಟ ಹರಿಮುರಳಿ ಶವವಾಗಿ ಪತ್ತೆ
Next Article dgdghh dgdghh dgdghh ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ದುರ್ಮರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up