ರಿಯಾದ್: ಹಜ್ ಯಾತ್ರೆಯ ನೆಪದಲ್ಲಿ ಭಿಕ್ಷಕರನ್ನು ಗಲ್ಫ್ ರಾಷ್ಟ್ರಗಳಿಗೆ ಕಲಿಸಬೇಡಿ ಎಂದು ಸೌದಿ ಅರೇಬಿಯಾ ಪಾಕಿಸ್ತಾನಕ್ಕೆ ನೀಡಿದೆ. ಧಾರ್ಮಿಕ ಯಾತ್ರೆಗೆ ನೀಡಲಾಗುವ ಉಮ್ರಾ ವೀಸಾದಡಿ ಸೌದಿ ಪ್ರವೇಶ ಮಾಡುತ್ತಿರುವ ಭಿಕ್ಷುಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪಾಕಿಸ್ತಾನಕ್ಕೆ ಅಂತಿಮ ಎಚ್ಚರಿಕೆ ನೀಡಿದೆ..
ಇತ್ತೀಚೆಗೆ 11 ವ್ಯಕ್ತಿಗಳನ್ನು ಕರಾಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಸೌದಿಗೆ ಭಿಕ್ಷೆ ಬೇಡಲು ತೆರಳುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಸೌದಿ ವಿಮಾನದಿಂದಲೇ ಅವರನ್ನು ಹೊರಹಾಕಲಾಗಿತ್ತು. ಪಾಕ್ ವಿದೇಶಾಂಗ ಇಲಾಖೆ ಪ್ರಕಾರ, ವಿದೇಶಗಳಲ್ಲಿರುವ ಭಿಕ್ಷುಕರಲ್ಲಿ 90% ಮಂದಿ ಪಾಕಿಸ್ತಾನದವರೇ ಆಗಿದ್ದಾರೆ.
ಸೌದಿ ರಾಯಭಾರಿ ನವಾಫ್ ಬಿನ್ ಸೈದ್ ಅಹ್ಮದ್ ಅಲ್-ಮಲ್ಕಿ ಅವರನ್ನು ಭೇಟಿಯಾಗಿದ್ದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಅವರು ಸೌದಿ ಅರೇಬಿಯಾಕ್ಕೆ ಭಿಕ್ಷುಕರನ್ನು ಕಳುಹಿಸುವ ಮಾಫಿಯಾ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು.
ಪಾಕಿಸ್ತಾನಿ ಭಿಕ್ಷುಕರು ಜಿಯಾರತ್ ನೆಪದಲ್ಲಿ ಮಧ್ಯಪ್ರಾಚ್ಯಕ್ಕೆ ಪ್ರಯಾಣಿಸುತ್ತಾರೆ. ಹೆಚ್ಚಿನ ಜನರು ಉಮ್ರಾ ವೀಸಾದಲ್ಲಿ ಸೌದಿ ಅರೇಬಿಯಾಕ್ಕೆ ಭೇಟಿ ನೀಡುತ್ತಾರೆ ಮತ್ತು ನಂತರ ಭಿಕ್ಷಾಟನೆ-ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗುತ್ತಾರೆ ಎಂದು ಸಾಗರೋತ್ತರ ಪಾಕಿಸ್ತಾನಿಗಳ ಕಾರ್ಯದರ್ಶಿ ಜೀಶಾನ್ ಖಂಜಾದಾ ಕಳೆದ ವರ್ಷ ಹೇಳಿದ್ದರು.