ಅ.24ರಿಂದ ಪ್ರಸಿದ್ಧ ಹಾಸನಾಂಬೆಯ ದರ್ಶನ

ಹಾಸನ : ಜಿಲ್ಲೆಯ ಪ್ರಸಿದ್ಧ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಇದೇ ಅ.24ರಿಂದ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಸಿಗಲಿದೆ. ಅಶ್ವೀಜ ಮಾಸದ ಪೌರ್ಣಿಯೆನ ನಂತರದಲ್ಲಿಆಗಮಿಸುವ ಮೊದಲ ಗರುವಾರದಂದು ಹಾಸನಾಂಬೆಯ ದೇಗುಲದ ಬಾಗಿಲು ತೆರೆಯಲಾಗುತ್ತದೆ. ವರ್ಷಕ್ಕೊಮ್ಮೆ ಸಿಗುವ ಹಾಸನಾಂಬೆ ದೇವಿಯ ದರ್ಶನಕ್ಕೆ ಸಹಸ್ರಾರು ಭಕ್ತಗಣ ಕಾದು ಕುಳಿತಿದೆ. ಹಾಸನಾಂಬೆಯ ಉತ್ಸವಕ್ಕೆ ಜಿಲ್ಲಾಡಳಿತವು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ವರ್ಷ 9 ದಿನಗಳವರೆಗೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶವಿದ್ದು, ಅಂದಾಜು 20 ಲಕ್ಷಕ್ಕೂ ಹೆಚ್ಚು ಭಕ್ತರು … Continue reading ಅ.24ರಿಂದ ಪ್ರಸಿದ್ಧ ಹಾಸನಾಂಬೆಯ ದರ್ಶನ