ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ಬಸ್ ಡ್ರೈವರ್
ಬಸ್ ಡ್ರೈವರ್ ಬಾಲಚಂದ್ರ ಎಸ್ ತುಕೋಜಿ ಆತ್ಮಹತ್ಯೆ
ಬೆಳಗಾವಿಯ ಎರಡನೇ ಸಾರಿಗೆ ಘಟಕದಲ್ಲಿ ನಡೆದ ಘಟನೆ
ಸ್ಥಳಕ್ಕೆ ಮಾರ್ಕೆಟ್ ಠಾಣೆ ಪೊಲೀಸರು ಭೇಟಿ ನೀಡಿದ ಪರಿಶೀಲನೆ
ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ 45 ವರ್ಷದ ಬಾಲಚಂದ್ರ ಎಸ್ ತುಕೋಜಿ ಎನ್ನುವ ಡ್ರೈವರ್ ಬಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಎರಡನೇ ಸಾರಿಗೆ ಘಟಕದಲ್ಲಿ ನಡೆದಿದೆ. ಒಂದು ತಿಂಗಳ ಅಂತರದಲ್ಲೇ ಬೆಳಗಾವಿಯ ಸಾರಿಗೆ ಘಟಕದಲ್ಲಿ ಮತ್ತೋರ್ವ ಸಾರಿಗೆ ಸಿಬ್ಬಿಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ ವಿಪರ್ಯಾಸವೇ ಸರಿ.
ಬಾಲಚಂದ್ರ ಅವರು ಕಳೆದ ಹಲವಾರು ದಿನಗಳಿಂದ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹಾಗಾಗಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪತಿ ಸಾವಿನ ಸುದ್ದಿ ತಿಳಿದು ಪತ್ನಿ ಡಿಪೋದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಸ್ಥಳಕ್ಕೆ ಮಾರ್ಕೆಟ್ ಠಾಣೆ ಪೊಲೀಸರು ಭೇಟಿ ನೀಡಿದ ಪರಿಶೀಲನೆ ನಡೆಸಿದ್ದಾರೆ.
ವರದಿ : ದಯಾನಂದ. ಎಂ

