ವಿಜಯನಗರ, ಜೂನ್.30: ಡಿವೈಡರ್ಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ (Death) ಘಟನೆ ವಿಜಯನಗರ (vijayanagara) ಜಿಲ್ಲೆ ಕೂಡ್ಲಿಗಿ ಬಳಿ ಹೆದ್ದಾರಿಯಲ್ಲಿ ತಡರಾತ್ರಿ ನಡೆದಿದೆ.
ಚಾಲಕ ವಿನಯ್ (27), ಚನ್ನಬಸವ (28) ಮೃತ ದುರ್ದೈವಿಗಳು. ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗಾಯಾಳುಗಳನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: 17 ವರ್ಷದ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತಕ್ಕೆ ಶುಭ ಕೋರಿದ ರಾಹುಲ್ ಗಾಂಧಿ
ಇಳಕಲ್ನಿಂದ (Ilkal) ಬೆಂಗಳೂರಿಗೆ ತೆರಳುತ್ತಿದ್ದ ಕಾರಿನಲ್ಲಿ 7 ಜನರು ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿಯಾಗಿದ್ದು ಇಬ್ಬರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಇನ್ನೂ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ವಿಶ್ವಕಪ್ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಮೋದಿ ಅಭಿನಂದನೆ