ತಿರುವನಂತಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇ 19ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಭೇಟಿ ನೀಡುವ ಮೂಲಕ ಭಾರತದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳಕ್ಕೆ ಆಗಮಿಸಲಿದ್ದು, ಬಳಿಕ ಕೊಟ್ಟಾಯಂ ಜಿಲ್ಲೆಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 19ರಂದು ಬೆಳಗ್ಗೆ ಶಬರಿಮಲೆಯ ಬಳಿಯಿರುವ ನೀಲಕ್ಕಲ್ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದು, ಬಳಿಕ ಪಂಪಾ ಬೇಸ್ ಕ್ಯಾಂಪ್‌ಗೆ ತೆರಳಿದ್ದಾರೆ.
ರಾಷ್ಟ್ರಪತಿಯೊಬ್ಬರು ಶಬರಿಮಲೆ ದೇಗುಲಕ್ಕೆ ಭೇಟಿ ನೀಡಲು ನಿರ್ಧರಿಸಿದ್ದು ಇದೇ ಮೊದಲು ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ತಿಳಿಸಿದರು.

