ಶಿಕ್ಷಕರು ಮಕ್ಕಳ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳು ಎಂದು ಹೇಳ್ತಾರೆ. ಆದ್ರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ವಿದ್ಯಾರ್ಥಿಗಳನ್ನು ತಿದ್ದಿ ಬುದ್ಧಿ ಹೇಳಬೇಕಾದ ಶಿಕ್ಷಕರೊಬ್ಬರು ಕಂಠ ಪೂರ್ತಿ ಕುಡಿದು ತೂರಾಡಿದ್ದಾರೆ. ಎಣ್ಣೆ ಏಟಲ್ಲಿ ದಾರಿ ಕಾಣದೆ ತೂರಾಡುತ್ತಾ ರಸ್ತೆಯಲ್ಲೇ ಬಿದ್ದು ಹೊರಳಾಡಿದ್ದು, ಸ್ಥಳೀಯರು ಇದು ಯಾರೋ ಅಸ್ವಸ್ಥನಿರಬೇಕು ಎಂದು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ.
ನಂತರ ಇದು ಕಾಲೇಜು ಪ್ರಾಧ್ಯಪಕ ಎಂದು ತಿಳಿದು ಬಂದಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಬೇಕಾದ ಶಿಕ್ಷರೊಬ್ಬರು ಕಂಠಪೂರ್ತಿ ಕುಡಿದು ಬೇಜವಬ್ದಾರಿಯಿಂದ ವರ್ತಿಸಿದ್ದಾರೆ. ಕಾಲೇಜು ಪ್ರಾಧ್ಯಾಪಕ ಎಣ್ಣೆ ಏಟಲ್ಲಿ ತೂರಾಡುತ್ತಾ ದಾರಿ ಕಾಣದೆ ರಸ್ತೆಯಲ್ಲೇ ಬಿದ್ದು ಹೊರಳಾಡಿದ್ದು, ಈ ದೃಶ್ಯವನ್ನು ಯಾರೋ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಉಪನ್ಯಾಸಕರ ಈ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಮಾಹಿತಿಗಳ ಪ್ರಕಾರ ಈ ಘಟನೆ ಮಧ್ಯಪ್ರದೇಶದ ರೇವಾ ನಗರದ ಪಿಲಿ ಕೋಥಿ ಕಾಂಪೌಂಟ್ ಬಳಿ ನಡೆದಿದ್ದು, ಕಾಲೇಜು ಉಪನ್ಯಾಸಕ ಕಂಠಪೂರ್ತಿ ಕುಡಿದು ತೂರಾಡಿದ್ದಾರೆ. ಅಲ್ಲಿದ್ದ ಸ್ಥಳೀಯರು ಇದು ಯಾರೋ ಮಾನಸಿಕ ಅಸ್ವಸ್ಥನಿರಬಹುದೆಂದು ಆಂಬ್ಯಲೆನ್ಸ್‌ಗೆ ಕರೆ ಮಾಡಿದ್ದಾರೆ.
ಆದ್ರೆ ವಿಡಿಯೋ ವೈರಲ್ ಆದ ಬಳಿಕ ಈ ವ್ಯಕ್ತಿ ರೇವಾ ಜಿಲ್ಲೆಯ ಸರ್ಕಾರಿ ಬಾಲಕಿಯ ಕಾಲೇಜಿನ ಪ್ರಾದ್ಯಾಪಕ ಅಭಿಷೇಕ್ ಮಾಳವೀಯ ಎಂಬುದು ತಿಳಿದು ಬಂದಿದೆ. ಅತಿಥಿ ಉಪನ್ಯಾಸಕರಾರ ಇವರು ಬಿ.ಕಾಂ ವಿದ್ಯಾರ್ಥಿಗಳಿಗೆ ಫಿನಾನ್ಸ್ ವಿಷಯದ ಬಗ್ಗೆ ಪಾಠ ಮಾಡುತ್ತಿದ್ದರು.ಈ ವಿಡಿಯೋ ವೈರಲ್ ಆದ ಬಳಿಕ ಕಾಲೇಜು ಆಡಳಿತ ಮಂಡಳಿಯು ಆ ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ..

