E-signature : ಇನ್ನುಮುಂದೆ ಆಸ್ತಿ ನೋಂದಣಿಗೆ ಇ-ಸಹಿ (e-Signature) ಕಡ್ಡಾಯವಾಗಲಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸ್ಟ್ಯಾಂಪ್ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿ ಕಂದಾಯ ಇಲಾಖೆ (revenue department) ಆದೇಶ ಹೊರಡಿಸಿದೆ. ಅದರಂತೆ ಯಾವುದೇ ನೋಂದಣಿ ಪ್ರಕ್ರಿಯೆಗಳು ಡಿಜಿಟಲೀಕರಣವಾಗಲಿದ್ದು, ಸೇಲ್ ಡೀಡ್ ಸೇರಿ ಎಲ್ಲ ಮಾದರಿಯ ಡೀಡ್‌ಗಳನ್ನು ಆರಂಭದಿಂದ ಅಂತಿಮ ಪ್ರಕ್ರಿಯೆವರೆಗೂ ಡಿಜಿಟಲೈಸ್ ಮಾಡಲು ಈ ಕಾಯ್ದೆಯಲ್ಲಿ ನಿಯಮ ರೂಪಿಸಲಾಗಿದೆ.
ಇನ್ನು ಇ-ಸಹಿ ಜತೆಗೆ ಇ-ಸ್ಟ್ಯಾಂಪ್‌ಗಳು ಕಡ್ಡಾಯವಾಗಿರಲಿದ್ದು, ಇದರಿಂದ ಸ್ಟ್ಯಾಂಪ್‌ಗಳ ದುರುಪಯೋಗ ಮತ್ತು ಸೋರಿಕೆ ತಡೆಯಲು ಅನುಕೂಲವಾಗಲಿದೆ. ಬ್ಯಾಂಕ್ ಚಲನ್‌ಗಳ ಮೂಲಕ ಸ್ಟ್ಯಾಂಪ್ ದುರುಪಯೋಗ ತಡೆಯಲು ಇದು ಸಹಕಾರಿಯಾಗಲಿದೆ. ವಿದ್ಯುನ್ಮಾನ ಸಹಿಗಳಿಗೆ ಕಾನೂನಾತ್ಮಕ ಬೆಂಬಲ ನೀಡಲಾಗಿದ್ದು, ವಿದ್ಯನ್ಮಾನ ವಿಧಾನಗಳ ಮೂಲಕ ಸ್ಟ್ಯಾಂಪ್ ಶುಲ್ಕ ಪಾವತಿಸಬೇಕಾಗಿದೆ.
ಸಿಬ್ಬಂದಿ ಮೂಲಕ ಸ್ಟ್ಯಾಂಪ್ ವಿತರಣೆಗೆ ಸಂಪೂರ್ಣ ತಡೆ ಬೀಳಲಿದೆ. ಡಿಜಿಟಲ್ ಸಹಿ ದುರ್ಬಳಕೆಯಾಗದಂತೆ ಜಿಲ್ಲಾಧಿಕಾರಿ ಅಥವಾ ಸಕ್ಷಮ ಪ್ರಾಧಿಕಾರದ ಅಧಿಕಾರಿಯ ಸಹಿಯನ್ನು ಆಧಾರ್‌ಗೆ ಜೋಡಣೆ ಮಾಡಲಾಗುತ್ತದೆ. ಸಹಿ ದೃಢೀಕರಣಗೊಂಡರೆ ಮಾತ್ರ ಸಹಿ ಸಾಧ್ಯ. ಡಿಜಿಟಲ್ ಸಹಿಯಲ್ಲಿ ಬಯೊಮೆಟ್ರಿಕ್ ಕೂಡ ಇರಲಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

