ತುಮಕೂರು : ಹಿಂದೆ ಸಂಸ್ಕೃತ ಕಲಿಯುವವರಿಗೆ,ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು,ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ, ಅನುಭವಗಳನ್ನು ದಾಖಲಿಸಿ ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು,,
ಕುರುಬ ಸಾಂಸ್ಕೃತಿಕ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು,,
ನಮ್ಮ ಜ್ಞಾನ ತಿಳುವಳಿಕೆಯಲ್ಲಿ ಸ್ಪಷ್ಟತೆ ಇರಬೇಕು ಕರ್ಮ ಸಿದ್ದಾಂತವನ್ನು ಧಿಕ್ಕರಿಸುವ ವೈಜ್ಞಾನಿಕವಾಗಿ ವೈಚಾರಿಕವಾಗಿ ಇರಬೇಕು ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು, ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ ಅಕ್ಷರ ಬರೆದಿದ್ದಕ್ಕೆ ಮಹಾಸಾಹಿತಿಯಾದ ಎನ್ನುವ ಮಾತನ್ನೆಲ್ಲ ನಂಬಬೇಡಿ, ವಾಲ್ಮೀಕಿ ಧರಡುಕೋರ ಆಗಿದ್ದ ಅನ್ನುವುದೆಲ್ಲ ನಂಬಬೇಡಿ, ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದನ್ನು ಬರೆದರೆ ಅವರ ಬಗ್ಗೆ ಇಂಥ ಕಥೆಗಳನ್ನು ಕಟ್ಟಿ ಬಿಡ್ತಾರೆ ಹುಷಾರು ಎಂದು ಎಚ್ಚರಿಸಿದರು,,
ಬಸವಣ್ಣ 850 ವರ್ಷಗಳ ಹಿಂದೆ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು, ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತದೆ,ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು,
ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ವಿವರಿಸಿದರು,,
ಜಾತಿಗೆ ಚಲನ ಇಲ್ಲ, ವರ್ಗಕ್ಕೆ ಚಲನೆ ಇಲ್ಲ, ಜಾತಿ ವ್ಯವಸ್ಥೆ ನಿಂತ ನೀರು, ಚಲನೆ ಇಲ್ಲ, ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ತುಂಬಾ ಮುಖ್ಯ ಎಂದರು,
ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ ಆದರೆ ಇವತ್ತಿಗೂ ಅತೃಶ್ಯತೆ ಹೋಗಿಲ್ಲರಿ ಇರುವುದು ಶೈಕ್ಷಣಿಕ ಸಮಾನತೆ ಇಲ್ಲದಿರುವುದು ಬೇಸರದ ಸಂಗತಿ,
ನಾನು ಶಿಕ್ಷಣ ಪಡೆದಿರುವುದು ನನ್ನ ಸ್ವಾರ್ಥಕ್ಕೆ ಅಲ್ಲ ಅವಕಾಶ ವಂಚಿತ ಸಮುದಾಯಗಳ ಬಿಡುಗಡೆಗಾಗಿ ವಿದ್ಯೆ ಸಂಪಾದನೆ ಮಾಡಿದ್ದೇನೆ, ಎನ್ನುವ ಅಂಬೇಡ್ಕರ್ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು.,
ಸಂವಿಧಾನ ಬರದೇ ಇದ್ದರೆ ನಾವು ನೀವು ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ,
ಮನಸ್ಮೃತಿ ಕಾರಣದಿಂದ ಜಾತಿ ಅಸಮಾನತೆ ಜಾತಿ ಶೋಷಣೆ ಜಾತಿ ದೌರ್ಜನ್ಯ ಕೂಡ ಹೆಚ್ಚಾಯಿತು,
ಪಟ್ಟ ಭದ್ರರು ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆ, ಅದಕ್ಕೆ ಬಸವಣ್ಣನವರು ಕರ್ಮ ಸಿದ್ದಾಂತವನ್ನು ತಿರಸ್ಕರಿಸಿದ್ದರು, ನಿಮ್ಮಲ್ಲಿ ಎಷ್ಟು ಜನ ಕರ್ಮ ಸಿದ್ದಾಂತ ತಿರಸ್ಕರಿಸಿದ್ದೀರ ಗೊತ್ತಿಲ್ಲ,
ಬ್ರಹ್ಮ ಒಬ್ಬರಿಗೆ ಶಿಕ್ಷಣ, ಮತ್ತೊಬ್ಬರಿಗೆ ಅನಕ್ಷರತೆ, ಸಿಗಲಿ ಅಂತ ಬರೆದರಾ? ಒಬ್ಬನಿಗೆ ಬಡವನಾಗು ಮತ್ತೊಬ್ಬನಿಗೆ ಶ್ರೀಮಂತನಾಗು ಅಂತ ಬ್ರಹ್ಮ ಬರೆದರಾ? ಒಬ್ಬ ಹೊಟ್ಟೆ ತುಂಬಾ ಉಣ್ಣಬೇಕು, ಉಳಿದವರು ಹಸಿವಿನಿಂದ ಬಿದ್ದಿರಬೇಕು ಎಂದು ಬ್ರಹ್ಮ ಬರೆದುಬಿಟ್ಟರಾ ಎಂದು ಪ್ರಶ್ನಿಸಿದರು,,
ಅಹಿಂದ ಸಮಾಜ ಮತ್ತು ಎಲ್ಲಾ ಜಾತಿ,ಧರ್ಮಗಳ, ಬಡತನ ಹಸಿವು ನಿವಾರಣೆ ಆಗಬೇಕು ಅನ್ನಕ್ಕಾಗಿ ಯಾರು ಇನ್ನೊಬ್ಬರ ಮನೆಯ ಬಾಗಿಲಿಗೆ ಹೋಗಿ ನಿಲ್ಲಬಾರದು, ಎನ್ನುವ ಕಾರಣದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೇ ಎಂದು ಸ್ಮರಿಸಿದರು,
ಕಾಯಕ ದಾಸೋಹ ಬಸವಣ್ಣನವರ ತತ್ವ ಇದನ್ನು ಎಲ್ಲರೂ ಪಾಲಿಸಬೇಕು ಎಂದರು,
ಎಲ್ಲಾ ಕ್ಷಮಿಕ ವರ್ಗಗಳ ಸಂಸ್ಕೃತಿ ಆಚಾರ ವಿಚಾರ ಹೊರಗೆ ಬರಬೇಕು ಇದಕ್ಕಾಗಿ ಎಲ್ಲರೂ ಸಾಹಿತ್ಯ ರಚನೆಯಲ್ಲಿ ತೊಡಗಬೇಕು ಎಂದರು,
ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗದಿಯಾಗಿತ್ತು, ಆದರೆ ಈಗ ಶಿಕ್ಷಣ ಸಿಕ್ಕಿದೆ,ನಮ್ಮ ನಿಮ್ಮ ಅನುಭವಗಳನ್ನು ದಾಖಲಿಸಿ, ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ, ನಮ್ಮ ಜ್ಞಾನ ವೈಜ್ಞಾನಿಕ ವಾಗಿ, ವೈಚಾರವಾಗಿ ಇರಬೇಕು ಎಂದು ತಿಳಿಸಿದರು,,
ವರದಿ : ನರಸಿಂಹರಾಜು ತುಮಕೂರು,,

