ಚಿತ್ರದುರ್ಗ: ಚುನಾವಣಾ (Election) ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ (Low BP) ಮೃತಪಟ್ಟಿರುವ ಘಟನೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ನಡೆದಿದೆ.
ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋದಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೆ ಚಳ್ಳಕೆರೆ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ದಾರಿ ಮಧ್ಯೆ ಮೃತಪಟ್ಟರು. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್- ಇಬ್ಬರು ಉಗ್ರರ ಸಾವು
ಚಳ್ಳಕೆರೆ ಆಸ್ಪತ್ರಗೆ ಅಪರ ಜೆಲ್ಲಾಧಿಕಾರಿ ಕುಮಾರಸ್ವಾಮಿ (Kumaraswamy) ಭೇಟಿ ನೀಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: 6 ವರ್ಷ ಚುನಾವಣೆಯಿಂದ ಮೋದಿಯನ್ನ ಅನರ್ಹಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ

