– 80 ಗ್ರಾಂ ಚಿನ್ನ, 7 ಕೆಜಿ ಬೆಳ್ಳಿ, 20 ಲಕ್ಷ ನಗದು, 35 ಲಕ್ಷ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿ
ರಾಯಚೂರು: ಲಿಂಗಸುಗೂರು (Lingsugur) ಪಟ್ಟಣದ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದ ಪೀಠಾದಿಪತಿಗಳನ್ನು ಹೆದರಿಸಿ, ದರೋಡೆ ಮಾಡಲಾಗಿದೆ. ಗುರುವಾರ ಮಧ್ಯರಾತ್ರಿ ಡಕಾಯಿತಿರ ಗ್ಯಾಂಗ್ ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದಿದೆ.
ಮಠದಲ್ಲಿ ಸಿದ್ದಲಿಂಗ ಸ್ವಾಮೀಜಿಯವರನ್ನು ಓಬ್ಬರೇ ಇದ್ದರು. ಅವರನ್ನ ದುಷ್ಕರ್ಮಿಗಳು ಎಬ್ಬಸಿ ಸ್ವಾಮೀಜಿಯವರಿಗೆ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ನಂತರ ಮಠದಲ್ಲಿದ್ದ ಸುಮಾರು 80 ಗ್ರಾಂ ತೂಕದ ಚಿನ್ನ ಹಾಗೂ 7 ಕೆಜಿ ಬೆಳ್ಳಿ ಆಭರಣಗಳು, ಸುಮಾರು 20 ಲಕ್ಷ ನಗದು ಸೇರಿದಂತೆ 35 ಲಕ್ಷ ಮೌಲ್ಯದ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ : ಹೆಚ್‌ಡಿಕೆ
ಈ ಕುರಿತು ಸಿದ್ಧಲಿಂಗ ಸ್ವಾಮೀಜಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ಡೇಂಜರ್ ಡೆಂಗ್ಯೂಗೆ ಹಾಸನದ ಬಾಲಕಿ ಬಲಿ- ಸಾವಿನ ಸಂಖ್ಯೆ 4 ಕ್ಕೆ ಏರಿಕೆ

