ಬೆಂಗಳೂರು : ಮಹದಾಯಿ ಯೋಜನೆ ವಿಚಾರದಲ್ಲಿ ಗೋವಾ ರಾಜಕೀಯ ಮಾಡುತ್ತಿದೆ. ಕರ್ನಾಟಕದ ಪರವಾಗಿ ಗೌರವ ಉಳಿಸಿಕೊಳ್ಳೋಕೆ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಮಹದಾಯಿ ಯೋಜನೆ ವಿಚಾರವಾಗಿ ಕೇಂದ್ರ ಜಲಶಕ್ತಿ, ಅರಣ್ಯ ಸಚಿವರು ರಾಜಕೀಯ ಮಾಡಲ್ಲ. ಈ ವಿಚಾರದಲ್ಲಿ ಗೋವಾ ರಾಜಕೀಯ ಮಾಡುತ್ತಿದೆ. ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಿಗೆ ಮನವಿ ಮಾಡುತ್ತೇವೆ. ಫಾರೆಸ್ಟ್ ಕ್ಲಿಯರನ್ಸ್ ಬಗ್ಗೆ ಕೇಂದ್ರ ಸಚಿವರ ಜೊತೆ ಮಾತಾಡುವೆ ಎಂದರು.
ಮಹದಾಯಿ ವಿಚಾರ ಇದು ನಮ್ಮ ಸ್ವಾಭಿಮಾನದ ಪ್ರಶ್ನೆ, 28 ಸಂಸದರು ಇದ್ದೇವೆ. ಇಂತಹ ಸಂದರ್ಭದಲ್ಲಿ ಬಾಯಿ ಮುಚ್ಚಿ ಕುಳಿತುಕೊಳ್ಳುವುದು ತಪ್ಪು. ಕರ್ನಾಟಕದ ಪರವಾಗಿ ಗೌರವ ಉಳಿಸಿಕೊಳ್ಳೋಕೆ ಒಂದಾಗಬೇಕು. ಒಂದು ಎಂಪಿಗಾಗಿ ನಾವು ರಾಜ್ಯವನ್ನು ಮಾರಿಕೊಳ್ಳಲು ಸಿದ್ಧವಿಲ್ಲ. ಎಂದು ಡಿಕೆ ಶಿವಕುಮಾರ್ ತಿಳಿಸಿದರು.
- ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ

