ದಸರಾ ಸಮೀಪದಲ್ಲಿರುವಾಗಲೇ ಮೈಸೂರಲ್ಲಿ ಸ್ಫೋಟಕ ವಸ್ತುಗಳು ಪತ್ತೆ, ಹೆಚ್ಚಿದ ಆತಂಕ

ಮೈಸೂರು : ನಗರದ ಹೊರವಲಯದ ತಿ.ನರಸೀಪುರದ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ಸಮೀಪ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಸ್ಫೋಟಕಗಳು ಪತ್ತೆಯಾಗಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಸ್ಫೋಟಕ ವಸ್ತುಗಳನ್ನು ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್ ಕವರ್‌ನಲ್ಲಿಟ್ಟು ಹೋಗಿದ್ದರು. ಸ್ಥಳೀಯರು ಹಾಗೂ ಹೋಟೆಲ್ ಸಿಬ್ಬಂದಿ ಅನುಮಾನಗೊಂಡು ನೋಡಿದಾಗ ಸ್ಫೋಟಕ ವಸ್ತುಗಳು ಎಂದು ತಿಳಿದು ಬಂದಿದೆ. ಬಳಿಕ ಹೋಟೆಲ್ ಸಿಬ್ಬಂದಿ ಪ್ಲಾಸ್ಟಿಕ್ ಕವರ್ ಅನ್ನು ಪಕ್ಕದಲ್ಲಿರುವ ಮರಕ್ಕೆ ನೇತು ಹಾಕಿ ಸ್ಥಳೀಯ ಪೊಲೀಸರಿಗೆ ಮಾಹಿತಿ … Continue reading ದಸರಾ ಸಮೀಪದಲ್ಲಿರುವಾಗಲೇ ಮೈಸೂರಲ್ಲಿ ಸ್ಫೋಟಕ ವಸ್ತುಗಳು ಪತ್ತೆ, ಹೆಚ್ಚಿದ ಆತಂಕ