ಕೋಲ್ಕತ್ತಾ: ಖ್ಯಾತ ಗಾಯಕಿ ಉಷಾ ಉತ್ತುಪ್ (Usha Utup) ಅವರ ಪತಿ ಜಾನಿ ಉತ್ತುಪ್ (Jani Utup) ಅವರು ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ.
ಜಾನಿ ಚಾಕೊ ಉತ್ತುಪ್(78) ಅವರು ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಈಗಾಗಲೇ ಅವರು ಮೃತಪಟ್ಟಿರುವುದಾಗಿ ವೈದೈರು ತಿಳಿಸಿದರು.

ಇಂದು ಜಾನಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಈ ಕುರಿತು ಪುತ್ರಿ ಅಂಜಲಿ ಉತ್ತುಪ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ತಂದೆಯ ಬಗ್ಗೆ ಮಾತನಾಡಿದ್ದಾರೆ.
ಜಾನಿ ಅವರು 70 ರ ದಶಕದಲ್ಲಿ ಟೀ ಪ್ಲಾನ್ಟೇಶನ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದೇ ವೇಳೆ ಅವರಿಗೆ ಉಷಾ ಅವರ ಪರಿಚಯವಾಯಿತ್ತು. ಬಳಿಕ ಅವರಿಬ್ಬರು ಮದುವೆಯಾದರು. ಈ ಜೋಡಿಗೆ ಒಬ್ಬ ಮಗ ಮತ್ತು ಮಗಳಿದ್ದಾರೆ.

