By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಧ್ಯಪ್ರಾಚ್ಯ ಯುದ್ಧದ ಆತಂಕ : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಆತಂಕವಿಲ್ಲ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಮಧ್ಯಪ್ರಾಚ್ಯ ಯುದ್ಧದ ಆತಂಕ : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಆತಂಕವಿಲ್ಲ
ರಾಜ್ಯ-KarnatakaLatest

ಮಧ್ಯಪ್ರಾಚ್ಯ ಯುದ್ಧದ ಆತಂಕ : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಆತಂಕವಿಲ್ಲ

Fears of Middle East War: No shortage of petrol-diesel in the state

Published March 10, 2026
Share
2 Min Read
Petrol Pump Petrol Pump Petrol Pump
SHARE

ಬೆಂಗಳೂರು, ಮಾರ್ಚ್ 10: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ದೇಶದ ಹಲವು ಭಾಗಗಳಲ್ಲಿ LPG ಸಿಲಿಂಡರ್‌ಗಳ ಕೊರತೆ ಎದುರಾಗುತ್ತಿರುವ ಸುದ್ದಿಗಳ ನಡುವೆ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಬಹುದು ಎಂಬ ಆತಂಕ ಜನರಲ್ಲಿ ಮೂಡಿದೆ. ಇದರ ಹಿನ್ನೆಲೆ ಕೆಲವೆಡೆ ಜನರು ಮುಂಚಿತವಾಗಿ ಇಂಧನ ಸಂಗ್ರಹಿಸಲು ಮುಂದಾಗಿದ್ದು, ಪೆಟ್ರೋಲ್ ಬಂಕ್‌ಗಳಲ್ಲಿ ವಾಹನಗಳ ಸಾಲು ಕಾಣಿಸಿಕೊಂಡಿರುವ ಘಟನೆಗಳು ವರದಿಯಾಗಿವೆ. ಕೆಲವರು ನೀರಿನ ಟ್ಯಾಂಕ್‌ಗಳಲ್ಲಿ ಇಂಧನ ತುಂಬಿಸಿಕೊಂಡು ಹೋಗುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಆದರೆ, ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಅಖಿಲ ಕರ್ನಾಟಕ ಫೆಡರೇಷನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ (AKFPT) ಸ್ಪಷ್ಟಪಡಿಸಿದೆ.

ರಾಜ್ಯದ ಎಲ್ಲಿಯೂ ಪೆಟ್ರೋಲ್ (MS) ಮತ್ತು ಡೀಸೆಲ್ (HSD) ಕೊರತೆ ಇಲ್ಲ. ಭಾರತ ಪೆಟ್ರೋಲಿಯಂ (BPCL), ಹಿಂದೂಸ್ತಾನ್ ಪೆಟ್ರೋಲಿಯಂ (HPCL) ಹಾಗೂ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL) ಸೇರಿದಂತೆ ಸಾರ್ವಜನಿಕ ಕ್ಷೇತ್ರದ ಮೂರು ತೈಲ ಮಾರಾಟ ಸಂಸ್ಥೆಗಳಲ್ಲಿ ಸಾಕಷ್ಟು ಇಂಧನ ಸಂಗ್ರಹವಿದೆ. ರಾಜ್ಯದ ಎಲ್ಲಾ ಟರ್ಮಿನಲ್‌ಗಳು ಮತ್ತು ಡಿಪೋಗಳಲ್ಲಿ ಸಮರ್ಪಕ ಹಾಗೂ ನಿರಂತರ ಇಂಧನ ಸಂಗ್ರಹ ಮಾಡಲಾಗಿದೆ ಎಂದು ಫೆಡರೇಷನ್ ತಿಳಿಸಿದೆ.

ಇದರ ಜೊತೆಗೆ ಕರ್ನಾಟಕದಾದ್ಯಂತ ಎಲ್ಲಾ ಪೆಟ್ರೋಲ್ ಬಂಕ್‌ಗಳು ಸಹಜವಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರ ಸಾಮಾನ್ಯ ಬೇಡಿಕೆಯನ್ನು ಪೂರೈಸಲು ಸಾಕಷ್ಟು ಪೆಟ್ರೋಲ್ ಮತ್ತು ಡೀಸೆಲ್ ಲಭ್ಯವಿದೆ ಎಂದು ಹೇಳಿದೆ.

ಇಂಧನ ಕೊರತೆ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಅಗತ್ಯಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಇಂಧನ ಖರೀದಿ ಮಾಡುವುದನ್ನು ತಪ್ಪಿಸಬೇಕು. ರಾಜ್ಯದ ಇಂಧನ ಸರಬರಾಜು ವ್ಯವಸ್ಥೆ ಸ್ಥಿರವಾಗಿ ಮತ್ತು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು AKFPT ಮನವಿ ಮಾಡಿದೆ.

ತೈಲ ಮಾರಾಟ ಕಂಪನಿಗಳೊಂದಿಗೆ ಫೆಡರೇಷನ್ ನಿರಂತರ ಸಂಪರ್ಕದಲ್ಲಿದ್ದು, ಪೆಟ್ರೋಲ್ ಡೀಲರ್‌ಗಳು ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸುವಂತೆ ಸೂಚಿಸಲಾಗಿದೆ. ಗ್ರಾಹಕರಿಗೆ ಯಾವುದೇ ತೊಂದರೆ ಆಗದಂತೆ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಮುಂದುವರಿಯಲಿದೆ ಎಂದು AKFPT ಮಾಧ್ಯಮ ಪ್ರಕಟಣೆಯಲ್ಲಿ ಭರವಸೆ ನೀಡಿದೆ.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ Siddaramaiah ಅವರು ಕೇಂದ್ರ ಪೆಟ್ರೋಲಿಯಂ ಸಚಿವ Hardeep Singh Puri ಅವರಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಗೃಹ ಬಳಕೆಯ ಎಲ್‌ಪಿಜಿಗೆ ಆದ್ಯತೆ ನೀಡುವ ಕೇಂದ್ರದ ಇತ್ತೀಚಿನ ಆದೇಶದಿಂದ ಬೆಂಗಳೂರಿನಲ್ಲಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ ವ್ಯತ್ಯಯ ಉಂಟಾಗಿ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ತಿಳಿಸಿದ್ದಾರೆ.

ನಗರದ ಅನೇಕ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ವಾಣಿಜ್ಯ ಸಿಲಿಂಡರ್ ಸಿಗದೆ ಸಮಸ್ಯೆ ಎದುರಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಹಲವಾರು ಹೋಟೆಲ್‌ಗಳು ತಾತ್ಕಾಲಿಕವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸುವ ಸಾಧ್ಯತೆ ಇದೆ ಎಂಬ ಆತಂಕವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದ್ದಾರೆ.

ಸಾವಿರಾರು ಸಣ್ಣ ಹೋಟೆಲ್, ಮೆಸ್ಸು ಹಾಗೂ ಕೇಟರಿಂಗ್ ಘಟಕಗಳ ಮೇಲೆ ಲಕ್ಷಾಂತರ ಜನರು ಅವಲಂಬಿತರಾಗಿರುವುದರಿಂದ ಈ ಕೊರತೆ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳ ದಿನನಿತ್ಯದ ಜೀವನಕ್ಕೂ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತೈಲ ಕಂಪನಿಗಳಾದ Indian Oil Corporation, Hindustan Petroleum ಮತ್ತು Bharat Petroleum ಮೂಲಕ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಶೀಘ್ರದಲ್ಲೇ ಪುನಃಸ್ಥಾಪಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

You Might Also Like

ಆ.15ಕ್ಕೆ ತೆರೆಗಪ್ಪಳಿಸಲಿದೆ ಪ್ಯಾನ್ ಇಂಡಿಯಾ “45” ಚಿತ್ರ, ಪ್ರಮೋಷನ್ ಆರಂಭಿಸಿದ ಚಿತ್ರತಂಡ

ಪಹಲ್ಗಾಮ್ ಉಗ್ರರ ದಾಳಿಯ ಗಾಯಾಳುಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಮಲೆಯಾಳಂ ನಟ ಮೋಹನ್ ಲಾಲ್‌ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಯತ್ನಾಳ್ ಹಿಂದೂ ಹುಲಿಯಲ್ಲ, ಹಿಂದೂ ಇಲಿ : ಮಾಜಿ ಶಾಸಕ ರೇಣುಕಾಚಾರ್ಯ

ಕುವೈತ್‌ನಲ್ಲಿ ಅಗ್ನಿ ಅವಘಡ- 4 ಭಾರತೀಯರು ಸೇರಿ 35 ಜನರ ಸಜೀವ ದಹನ

TAGGED:Fuel Shortage
Share This Article
Facebook Copy Link Print
Previous Article Auo Gas Auo Gas Auo Gas ಇರಾನ್–ಇಸ್ರೇಲ್ ಯುದ್ಧದ ಪರಿಣಾಮ ಗ್ಯಾಸ್ ದರ ಏರಿಕೆ, ಸಂಕಷ್ಟಕ್ಕೆ ಸಿಲುಕಿದ ಆಟೋ ಚಾಲಕರು
Next Article Hotel Hotel Hotel ಎಲ್‌ಪಿಜಿ ಸಿಲಿಂಡರ್ ಕೊರತೆ, ಹೋಟೆಲ್ ಉದ್ಯಮದಲ್ಲಿ ಆತಂಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

lakshmi lakshmi lakshmi
ಗ್ಯಾಸ್ ದರ ಏರಿಕೆ ಮಾಡಿದ ಮೋದಿ ಸರ್ಕಾರಕ್ಕೆ ಅಭಿನಂದನೆ : ಸಚಿವೆ ಲಕ್ಷ್ಮೀ ಹೆಬಾಳ್ಕರ್ ವ್ಯಂಗ್ಯ
ರಾಜ್ಯ-Karnataka
March 10, 2026
DK Sh DK Sh DK Sh
ನಾಳೆ ಸುದ್ದಿಗೋಷ್ಠಿಯಲ್ಲಿ ಎಲ್ಲ ವಿಷಯ ಮಾತಾಡ್ತೀನಿ : ಡಿಕೆಶಿ
ರಾಜಕೀಯ | Politics
March 10, 2026
Fi Fi Fi
ಬೆಂಗಳೂರು ಗ್ರಾಮಾಂತರ: ಕೇಬಲ್ ತಯಾರಿಕಾ ಕಂಪನಿಯಲ್ಲಿ ಅಗ್ನಿ ಅವಘಡ
ಬೆಂಗಳೂರು-Bengaluru
March 10, 2026
Eshwarappa Eshwarappa Eshwarappa
ಸಿದ್ದರಾಮಯ್ಯನವರದು ಹರಿದ ಬಟ್ಟೆಯಿಂದ ಹೊಲಿದ “ಕೌದಿ” ಬಜೆಟ್ : ಈಶ್ವರಪ್ಪ
ರಾಜ್ಯ-Karnataka Latest
March 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up