-ಆರೋಗ್ಯ ಇಲಾಖೆ ಕ್ವಾಟರ್ಸ್ನಲ್ಲೇ ಕೃತ್ಯ
ಮಂಡ್ಯ: ಪಾಂಡವಪುರ (Pandavapura) ಆರೋಗ್ಯ ಇಲಾಖೆ ಕ್ವಾರ್ಟರ್ಸ್ ನಲ್ಲಿ ಭ್ರೂಣಲಿಂಗ ಪತ್ತೆ (Fetal Gender Detection) ಮತ್ತು ಹತ್ಯೆ ನಡೆಯುತ್ತಿರುವ ವಿಚಾರ ತಿಳಿದ ಜಿಲ್ಲಾ ಆರೋಗ್ಯ ಅಧಿಕಾರಿ (Health Officer) ಡಾ.ಮೋಹನ್, (Dr. Mohan) ತಾಲೂಕು ಆರೋಗ್ಯ ಅಧಿಕಾರಿ ಡಾ.ಅರವಿಂದ್ (Dr. Aravind) ಮತ್ತು ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಗರ್ಭಪಾತಕ್ಕೆ (Abortion) ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ದಾಳಿ ವೇಳೆ ಗರ್ಭಪಾತ ಮಾಡುವ ಯಂತ್ರೋಪಕರಣಗಳು ಜಪ್ತಿ ಮಾಡಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಇದೆಂಥಾ ದುರ್ವಿಧಿ.. ನೀರು ತರಲು ಹೋದವರು ನೀರು ಪಾಲು – ಇಬ್ಬರು ಸಾವು
ಪಾಂಡವಪುರ ತಾಲೂಕು ಆಸ್ಪತ್ರೆ (Taluk Hosiptal0 ಅಂಬುಲೆನ್ಸ್ ಚಾಲಕ ಆನಂದ್, ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಡಿ ಗ್ರೂಪ್ ಸಿಬ್ಬಂದಿ ಅಶ್ವಿನಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕ ಆನಂದ್ಗೆ ನೀಡಲಾಗಿದ್ದ ಸರ್ಕಾರಿ ನಿವಾಸದಲ್ಲೇ ಕೃತ್ಯ ಎಸಗಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಡರಾತ್ರಿ ದಾಳಿ ಮಾಡಿದ್ದಾರೆ. ಈ ದಂಧೆಯಲ್ಲಿ ಕೆಲವು ವೈದ್ಯಾಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ನಾಗರೆಡ್ಡಿ ಪಾಟೇಲ್ ವಿಧಿವಶ
ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಎಲ್ಲಿದಿಯಪ್ಪ ಪ್ರಜ್ವಲ್, ವಿಚಾರಣೆಗೆ ಹಾಜರಾಗುವಂತೆ ಕುಟುಂಬಸ್ಥರು, ಆಪ್ತರಿಂದಲೇ ಒತ್ತಡ