ಸೇಡಂ: ‘ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 50 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂಕಲ್ಪ ಮಾಡಿದೆ. ಈಗಾಗಲೇ ಎರಡು ವರ್ಷಗಳ ಅವಧಿಯಲ್ಲಿ 15 ಸಾವಿರ ಹುದ್ದೆಗಳ ಭರ್ತಿ ಕ್ರಮ ತೆಗೆದುಕೊಂಡಿದ್ದು ಮುಂದಿನ ದಿನಗಳಲ್ಲಿ 35 ಸಾವಿರ ಹುದ್ದೆಗಳನ್ನು ಮಾಡಿಕೊಳ್ಳಲಾಗುತ್ತದೆ’ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ಪಟ್ಟಣದ ಬಸವ ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣಗೊಂಡ ನೂತನ 6 ಕೋಣೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಈ ಹಿಂದೆ ನಾನು ಅಧಿಕಾರದಲ್ಲಿದ್ದಾಗ ಗ್ರಾಮ ಮತ್ತು ತಾಂಡಾಗಳಿಗೆ ಡಾಂಬಾರರ್ ರಸ್ತೆ ಮಾಡಿದ್ದೆ.
ಈ ಅವಧಿಯಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸುಸಜ್ಜಿತ ಶಾಲಾ ಕೋಣೆಗಳನ್ನು ನಿರ್ಮಿಸಿ ಮೂಲ ಸೌಕರ್ಯ ಒದಗಿಸಲಾಗುತ್ತದೆ. ಹಣಾದಿ ರಸ್ತೆಗಳನ್ನು ನಿರ್ಮಿಸುವ ಉದ್ದೇಶವಿದ್ದು ಮುಂದಿನ 3 ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.
- ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
- ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
- ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
- ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
- ವಾಣಿಜ್ಯ ಸಿಲಿಂಡರ್ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್ ಉದ್ಯಮಕ್ಕೆ ಕೊನೆಗೂ ರಿಲೀಫ್

