ಬೆಳಗಾವಿ: ನಿನ್ನೆ ಮಧ್ಯಾಹ್ನ ಪ್ರವಾಸಿಗರ ಸ್ವರ್ಗ ಕಾಶ್ಮೀರದ ಪಹಲ್ಗಾಂನಲ್ಲಿ ಭಾರತೀಯ ಸೈನಿಕರ ವೇಶದಲ್ಲಿ ಬಂದಿದ್ದ ಉಗ್ರರು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಸುಮಾರು 30 ಜನ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಖಂಡಿಸಿ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇಂದು ಬೆಳಗಾವಿ ನಗರದ ಕೋರ್ಟ್ ಆವರಣದಿಂದ ಪ್ರತಿಭಟನೆ ಆರಂಭಿಸಿದ ನೂರಾರು ವಕೀಲರು ಚನ್ನಮ್ಮ ವೃತ್ತದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿದರು. ಬಳಿಕ ಉಗ್ರರ ದಾಳಿ ಖಂಡಿಸಿ ಡಿಸಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಗೃಹ ಸಚಿವ ಅಮೀತ್ ಶಾ ಗೆ ಮನವಿ ರವಾನಿಸಿದರು.
ಮುಗ್ಧ ಪ್ರವಾಸಿಗರ ಮೇಲೆ ದಾಳಿ ಆಗಿದೆ. ಉಗ್ರರು ಪ್ರವಾಸಿಗರ ಹೆಸರು, ಧರ್ಮ ಕೇಳಿ ಗುಂಡು ಹಾರಿಸಿದ್ದಾರೆ. ಧರ್ಮ ಕೇಳಿ ದಾಳಿ ಮಾಡಿರುವ ಉಗ್ರರನ್ನು ಸುಮ್ಮನೆ ಬಿಡಬಾರದು. ದಾಳಿ ಮಾಡಿದ ಉಗ್ರರು ಎಲ್ಲ ಅಡಗಿದರು ಹಿಡಿದು ಎನ್ಕೌಂಟರ್ ಮಾಡಬೇಕು ಎಂದು ಆಗ್ರಹಿಸಿದರು.
ವರದಿ. ದಯಾನಂದ. ಎಂ.

