ನವದೆಹಲಿ, ಜನವರಿ 14: ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರ ದೆಹಲಿ ನಿವಾಸದಲ್ಲಿ ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಬೆಳಗ್ಗೆ ಸುಮಾರು 8.05 ಗಂಟೆಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ಲಭಿಸಿದ್ದು, ಕೂಡಲೇ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಮನೆಯೊಳಗಿನ ಒಂದು ಕೋಣೆಯಲ್ಲಿ ಇರಿಸಿದ್ದ ಹಾಸಿಗೆಯಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿತು.
ಅಗ್ನಿಶಾಮಕ ದಳದ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾದರು. ಪರಿಣಾಮವಾಗಿ ಬೆಂಕಿ ಇನ್ನಿತರ ಕೋಣೆಗಳಿಗೆ ಹರಡುವುದನ್ನು ತಡೆಯಲಾಯಿತು.
ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

