ಗಳೂರು: ನಗರದಲ್ಲಿ ರೆಸ್ಟೋರೆಂಟ್ ನಲ್ಲಿ ಹೊತ್ತಿಕೊಂಡ ಬೆಂಕಿಯೊಂದು ಪಕ್ಕದ ಸ್ಪಾಗೂ ತಗುಲಿದ ಪರಿಣಾಮ ಇಬ್ಬರು ಯುವಕ-ಯುವತಿಯರು ಸಜೀವ ದಹನವಾಗಿರುವಂತ ಭೀಕರ ಅಗ್ನಿ ಅವಘಡ ಸಂಭವಿಸಿದೆ.
ಬೆಂಗಳೂರಿನ ಯಲಹಂಕದ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದಲ್ಲಿರುವಂತ ಲಾಡ್ಜ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಅಗ್ನಿ ಅವಘಡದ ವೇಳೆಯಲ್ಲಿ ಸಮೀಪದ ಬಿಲ್ಡಿಂಗ್ ನಲ್ಲಿನ ಸ್ಪಾನಲ್ಲಿ ಯುವತಿ ಕೆಲಸ ಮಾಡುತ್ತಿದ್ದರು. ರೆಸ್ಟೋರೆಂಟ್ ನ ಬೆಂಕಿ ಪಕ್ಕದ ಬಿಲ್ಡಿಂಗ್ ಗೂ ವ್ಯಾಪಿಸಿದ ಹಿನ್ನಲೆಯಲ್ಲಿ ಯುವಕ-ಯುವತಿಯರು ಸಜೀವ ದಹನವಾಗಿದ್ದಾರೆ.
ಆತ್ಮಹತ್ಯೆ ಶಂಕೆ :
ಪ್ರೇಮಿಗಳ ಜೋಡಿ ಲಾಡ್ಜ್‌ನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮ*ಹತ್ಯೆಗೆ ಶರಣಾದ ಪರಿಣಾಮವಾಗಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರೂ ಜೀವ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ಮೃತ ಪ್ರೇಮಿಗಳು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮತ್ತು ಸ್ಪಾ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಎನ್ನಲಾಗಿದೆ. ಇವರಿಬ್ಬರಿಗೂ ಹಲವು ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಆದರೆ ಮನೆಯವರಿಂದ ಈ ಸಂಬಂಧಕ್ಕೆ ಒಪ್ಪಿಗೆ ಸಿಗದ ಹಿನ್ನೆಲೆ ಸಾವಿನ ನಿರ್ಧಾರ ಕೈಗೊಂಡರು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

