ಬೆಂಗಳೂರು : , ಅಭಿನಯ ಚಕ್ರವರ್ತಿ ಹಾಗೂ ಎಲ್ಲರ ನೆಚ್ಚಿನ ಬಾದ್ಷಾ ಕಿಚ್ಚ ಸುದೀಪ್ ಇಂದು (ಸೆ.02) 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ಸಿನಿಮಾಗಳ ಅಪ್ಡೇಟ್ನೊಂದಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.
ಸುದೀಪ್ ಅವರೇ ಹೇಳಿದಂತೆ ಇದು ಅವರ ವೃತ್ತಿಜೀವನದ ಅತಿದೊಡ್ಡ ಸಿನಿಮಾ ಬಹು ನಿರೀಕ್ಷಿತ ಬಿಲ್ಲ ರಂಗ ಬಾಷಾ ಸಿನಿಮಾ. ಈಗಾಗಲೇ ಶೂಟಿಂಗ್ ಆರಂಭವಾಗಿದ್ದು, ಒಂದು ಶೆಡ್ಯೂಲ್ ಕಂಪ್ಲೀಟ್ ಆಗಿದೆ. ಹುಟ್ಟುಹಬ್ಬ ಹಿನ್ನೆಲೆ ಇಂದು ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ.
ಅನೂಪ್ ಭಂಡಾರಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಮೂರು ಪಾತ್ರಗಳಿದ್ದು, ಅದರಲ್ಲಿ ಒಂದು ಪಾತ್ರವನ್ನು ಪರಿಚಯಿಸಿದ್ದಾರೆ. ಪೋಸ್ಟರ್ನಲ್ಲಿ ನೀಡಿರುವ ಸುಳಿವು ಪ್ರಕಾರ ಬಾಷಾ ಪಾತ್ರವನ್ನು ಅನೂಪ್ ಪರಿಚಯಿಸಿದ್ದಾರೆ.
ನಂದಿ ಲಿಂಕ್ಸ್ ಗ್ರೌಂಡ್ನಲ್ಲಿ ಹುಟ್ಟುಹಬ್ಬ ಆಚರಣೆ :
ಪ್ರತಿಬಾರಿ ಮನೆಯ ಮುಂದೆ ಸುದೀಪ್ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದರು. ಹಾರ-ತುರಾಯಿ, ಕೇಕ್ ಮತ್ತು ಗಿಫ್ಟ್ ಸೇರಿದಂತೆ ಯಾವುದನ್ನು ತೆಗೆದುಕೊಂಡು ಬರಬೇಡಿ, ಅದೇ ಹಣದಲ್ಲಿ ನಿರಾಶ್ರಿತರಿಗೆ ಏನಾದರೂ ಸಹಾಯ ಮಾಡಿ ಎಂದು ಕೋರಿದ್ದರು. ಆದರೆ, ಕಳೆದ ಬಾರಿಯಂತೆ ಈ ಬಾರಿಯೂ ಸುದೀಪ್ ಅವರ ತಮ್ಮ ಮನೆಯ ಮುಂದೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿಲ್ಲ. ತಮ್ಮ ತಾಯಿ ತೀರಿ ಇನ್ನು ವರ್ಷ ಕೂಡ ಕಳೆಯದೇ ಇರುವುದರಿಂದ ಮನೆಯಲ್ಲಿ ಸಂಭ್ರಮಾಚರಣೆ ಮಾಡಲಿಲ್ಲ. ಆದರೂ ಅಭಿಮಾನಿಗಳಿಗೆ ನಿರಾಸೆ ಮಾಡದೇ ನಾಯಂಡಹಳ್ಳಿ ಸಮೀಪದ ನಂದಿ ಲಿಂಕ್ಸ್ ಗ್ರೌಂಡ್ನಲ್ಲಿ ಅಭಮಾನಿಗಳ ಸಮ್ಮುಖದಲ್ಲಿ ಸುದೀಪ್ ಅವರು ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡರು.
ಮಾರ್ಕ್ ಟಾಸ್ ರಿಲೀಸ್ :
ನಿನ್ನೆ ಕಿಚ್ಚ 47 ಸಿನಿಮಾದ ಟೈಟಲ್ ಟೀಸರ್ ಬಿಡುಗಡೆಯಾಯಿತು. ಈ ಚಿತ್ರಕ್ಕೆ ಮಾರ್ಕ್ ಎಂದು ಹೆಸರಿಡಲಾಗಿದ್ದು, ಡಿಸೆಂಬರ್ 25ಕ್ಕೆ ಕ್ರಿಸ್ಮಸ್ ಹಬ್ಬದಂದು ಬಿಡುಗಡೆಯಾಗುತ್ತದೆ. ಈ ಚಿತ್ರದನ್ನು ಮ್ಯಾಕ್ಸ್ ಡೈರೆಕ್ಟರ್ ವಿಜಯ್ ಕಾರ್ತಿಕೇಯ ಅವರೇ ನಿರ್ದೇಶಿಸಿದ್ದಾರೆ. ಎರಡನೇ ಭಾರಿ ಯಶಸ್ವಿ ಸಿನಿಮಾ ತಂಡ ಒಟ್ಟಿಗೆ ಸೇರಿದೆ.

