ಕಾನ್ ಫಿಲ್ಮ್ ಫೆಸ್ಟಿವೆಲ್ (Cannes Festival) ವಿಶ್ವದ ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಒಂದು. ಇದೀಗ ಕನ್ನಡಿಗನ ಕಿರುಚಿತ್ರಕ್ಕೆ (Short Film) ಪ್ರಶಸ್ತಿ ದೊರೆತಿದೆ.
ಮೈಸೂರಿನ ಹುಡುಗ ಚಿದಾನಂದ ನಾಯಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ’ (sunflowers were the first ones to know) ಕಿರುಚಿತ್ರ ಆಯ್ಕೆಯಾಗಿತ್ತು. ಇದೀಗ ಮೊದಲ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ ನಿರ್ದೇಶಕರು. ಇದು ಫೆಸ್ಟಿವೆಲ್ ಗೆ ಆಯ್ಕೆಯಾದ ಮೊದಲ(First) ಕನ್ನಡಿಗರ ಕಿರುಚಿತ್ರವಾಗಿತ್ತು.
ಚಿದಾನಂದ (Chidananda Nayak) ಅವರು ರಚನೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದರು. ಇನ್ನು ಇತ್ತ ವಿ. ಮನೋಜ್ ಅವರ ಸಂಕಲನವಿದೆ. ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್ ಸ್ಟಿಟ್ಯೂಟ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಅಲ್ಲದೇ ಕನ್ನಡದ ಅನೇಕ ಕಲಾವಿದರು ಈ ಕಿರುಚಿತ್ರದಲ್ಲಿ ನಟಿಸಿದ್ದಾರೆ.ಇದನ್ನೂ ಓದಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಿಲೀಸ್ ಆಗಲಿದೆ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಹಾಡು
ಕಾನ್ ಚಿತ್ರೋತ್ಸವಕ್ಕೆ ತಮ್ಮ ಕಿರುಚಿತ್ರ ಆಯ್ಕೆಯಾಗಿರುವುದು ಸಹಜವಾಗಿಯೇ ಚಿದಾನಂದ್ ಅವರಿಗೆ ಸಂಭ್ರಮ ತಂದಿತ್ತು. ಕಾನ್ ನೋಡುಗರು ಈ ಕಿರುಚಿತ್ರವನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಕೊನೆಗೂ ಕನ್ನಡದ ಹುಡುಗ ಗೆದ್ದಿದ್ದಾನೆ. ಈ ಮೂಲಕ ಕನ್ನಡದ ಹಿರಿಮೆಯನ್ನು ಎತ್ತಿ ಹಿಡಿದಿದ್ದಾನೆ.

