ಹಾವೇರಿ: ರಾಜ್ಯಾದ್ಯಂತ ಡೆಂಗ್ಯೂ (Dengue) ಮಹಾಮಾರಿ ಅರ್ಭಟ ಹೆಚ್ಚಾಗಿದ್ದು, ಈ ನಡುವೆ ಜಿಲ್ಲೆಯಲ್ಲಿ ಇಲಿ ಜ್ವರ (Rat Fever) ಪತ್ತೆಯಾಗಿದ್ದು ಮೊದಲ ಸಾವಾಗಿದೆ.
ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದ ಉಮೇಶ್(72) ವೃದ್ಧ ಎಂದು ಮೃತ ವ್ಯಕ್ತಿಯನ್ನ ಗುರುತಿಸಲಾಗಿದೆ. ನಿನ್ನೆಯಷ್ಟೇ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದ್ದು ಪತ್ತೆಯಾಗಿತ್ತು.
ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಉಮೇಶ್ ಅವರು ಹಾವೇರಿ, ಮಂಗಳೂರು ಸೇರಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮಂಗಳೂರಿನ ಆಸ್ಪತ್ರೆಯಲ್ಲಿ ರಕ್ತ ತಪಾಸಣೆ ನಡೆಸಿದಾಗ ಇಲಿ ಜ್ವರ ಇರುವುದು ದೃಢಪಟ್ಟಿತ್ತು. ಇಲಿ ಜ್ವರದ ಜೊತೆ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ವೃದ್ಧ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇಲಿ ಜ್ವರದಿಂದ ವೃದ್ಧ ಸಾವು ಹಿನ್ನೆಲೆ ಹಾವೇರಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಇದನ್ನೂ ಓದಿ: ಗೋವಾ ಸಿಎಂ ಪ್ರಮೋದ್ ಸಾವಂತ್‌ಗೆ ಮಹದಾಯಿ ವಿಚಾರದಲ್ಲಿ ಮುಖಭಂಗ
ಇತ್ತೀಚೆಗೆ ಹಾವೇರಿ ತಾಲೂಕಿನ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಆದರೆ ಕಳೆದ 2 ದಿನಗಳ ಹಿಂದೆ ಮಂಗಳೂರಿನಲ್ಲಿ ಹಾವೇರಿ ನಿವಾಸಿ ಇಲಿ ಜ್ವರಕ್ಕೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಆತಂಕ ಹುಟ್ಟಿಸಿದ ಡೆಂಗ್ಯೂ ಪ್ರಕರಣಗಳು- ವಿಫಲವಾಯ್ತಾ ಸರ್ಕಾರ?
ಇನ್ನು ಮತ್ತೊಂದೆಡೆ ಇಲಿ ಜ್ವರ ಕಾಣಿಸಿಕೊಂಡ ಬಾಲಕನಿಗೆ ಕಳೆದ ಒಂದು ವಾರದಿಂದ ನಿರಂತರವಾಗಿ ಜ್ವರ ಕಾಣಿಸಿಕೊಂಡ ಹಿನ್ನಲೆ ಹಾವೇರಿ ಜಿಲ್ಲಾಸ್ಪತ್ರಗೆ ದಾಖಲಿಸಲಾಗಿದೆ. ಮೊದಲು 12 ವರ್ಷದ ಬಾಲಕನಿಗೆ ಜಾಂಡೀಸ್ ರೋಗ ಕಾಣಿಸಿಕೊಂಡಿತ್ತು. ರೋಗ ಗುಣಮುಖಗೊಂಡು ಊರಿಗೆ ಹೋಗಿದ್ದ. ಮತ್ತೆ ಬಾಲಕನಲ್ಲಿ ಜ್ವರ ಕಾಣಿಸಿಕೊಂಡ ಹಿನ್ನಲೆ ಜಿಲ್ಲಾಸ್ಪತ್ರೆಗೆ ದಾಖಲಿದ್ದಾರೆ. ಬಾಲಕನ ರಕ್ತಪರೀಕ್ಷೆಯ ನಂತರ ಬಾಲಕನಿಗೆ ಇಲಿ ಜ್ವರ ಪತ್ತೆಯಾಗಿದೆ. ಬಾಲಕ ಆರೋಗ್ಯ ಸ್ಥಿರವಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಬಾಲಕ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದನ್ನೂ ಓದಿ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ರಣಕೇಕೆ- 24 ಗಂಟೆಯಲ್ಲಿ 159 ಮಂದಿಯಲ್ಲಿ ಸೊಂಕು ಪತ್ತೆ

