ಪ್ರಧಾನಿ ನರೇಂದ್ರ ಮೋದಿ ಟೋಕಿಯೋಗೆ ತೆರಳಿದ್ದು, ಟೋಕಿಯೊದ ಹೋಟೆಲ್ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ವಲಸಿಗರನ್ನು ಸ್ವಾಗತಿಸಿ ಅವರೊಂದಿಗೆ ಸಂವಾದ ನಡೆಸಿದರು.ಟೋಕಿಯೋಗೆ ಆಗಮಿಸಿದ ಪ್ರಧಾನಿ ಮೋದಿಗೆ ಆದರದ ಸ್ವಾಗತ ಸಿಕ್ಕಿದೆ.
ಎರಡು ದಿನಗಳ ದೇಶ ಭೇಟಿಯ ಸಮಯದಲ್ಲಿ, ಪ್ರಧಾನಿಯವರು ಟೋಕಿಯೊದಲ್ಲಿ ಜಪಾನಿನ ಕೈಗಾರಿಕೋದ್ಯಮಿಗಳು ಮತ್ತು ರಾಜಕೀಯ ನಾಯಕರನ್ನು ಸಹ ಭೇಟಿ ಮಾಡಲಿದ್ದಾರೆ.
ಪ್ರಧಾನಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 1 ರವರೆಗೆ ಚೀನಾದಲ್ಲಿರಲಿದ್ದು, ಅಲ್ಲಿ ಅವರು ಟಿಯಾಂಜಿನ್ನಲ್ಲಿ ನಡೆಯುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಮೋದಿಯವರ ಎರಡು ದಿನಗಳ ಭಾರತ ಭೇಟಿಯ ಸಂದರ್ಭದಲ್ಲಿ ಜಪಾನ್ ಸರ್ಕಾರ ಭಾರತಕ್ಕೆ 10 ಟ್ರಿಲಿಯನ್ ಯೆನ್ (USD 68 ಬಿಲಿಯನ್) ಹೂಡಿಕೆ ಗುರಿಯನ್ನು ಘೋಷಿಸುವ ಸಾಧ್ಯತೆಯಿದೆ. ಜಪಾನ್ ಭೇಟಿ ಮುಗಿಸಿದ ನಂತರ, ಪ್ರಧಾನಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 1 ರವರೆಗೆ ಚೀನಾದಲ್ಲಿರಲಿದ್ದಾರೆ ಅಲ್ಲಿ ಅವರು ಟಿಯಾಂಜಿನ್ನಲ್ಲಿ ನಡೆಯುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

